ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ: ತೇಪೆ ಹಚ್ಚಲು ಮುಂದಾದ ಭವಾನಿ ರೇವಣ್ಣ!
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಹಾಸನ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಹೆಸರು ಪೈನಲ್ ಆಗಿದೆ.
ಹಾಸನ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಹಾಸನ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಹೆಸರು ಪೈನಲ್ ಆಗಿದೆ.
ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರ ಸಭೆಯಲ್ಲಿ ಡಾ.ಸೂರಜ್ ಗೌಡ ಹೆಸರು ಅವಿರೋಧವಾಗಿ ಆಯ್ಕೆಯಾಯಿತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ ತಿಳಿಸಿದ್ದಾರೆ.
ಡಾ. ಸೂರಜ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ಹೆಸರು ಕೂಡ ಕೇಳಿ ಬಂದಿತ್ತು. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಭವಾನಿ ರೇವಣ್ಣ, ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದ್ದರು. ಅವರಿಗೆ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.