ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮ: ಬಿ.ಎಸ್,ಯಡಿಯೂರಪ್ಪ

ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಖಂಡಿತಾ ಕ್ರಮ ಕೈಗೊಳ್ಳುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ
Manjula VN
Updated On : 19 Nov 2021, 8:06 am

ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ  ಮೋದಿಯವರು ಖಂಡಿತಾ ಕ್ರಮ ಕೈಗೊಳ್ಳುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಉತ್ತರ ಕನ್ನಡದಲ್ಲಿ ನಡಯೆುತ್ತಿರುವ ಜನ ಸ್ವರಾಜ್ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾರ ಬಳಿ ದಾಖಲೆ ಇದ್ದರೂ ಕೊಡಲಿ. ಯಾವುದೇ ಪಕ್ಷದವರೂ ದಾಖಲೆ ನೀಡಿದರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮೋದಿಯವರು ಹೇಳಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಅವರು, ತಮ್ಮೊಳಗಿನ ಒಳಜಗಳಗಳ ಕಾಣದಂತೆ ಮಾಡಲು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆರೋಪ ಹಾಗೂ ವಾಕ್ಸಮರ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments