ಸಂದೇಶ್ ನಾಗರಾಜ್ 
ರಾಜಕೀಯ

JDS ಸೇರಿದ ಒಂದೇ ದಿನದಲ್ಲಿ ಸಿದ್ದರಾಮಯ್ಯ ಆಪ್ತ ಮಂಜೇಗೌಡಗೆ ಪರಿಷತ್ ಟಿಕೆಟ್; ಹಾಲಿ ಸದಸ್ಯ ಸಂದೇಶ್ ನಾಗರಾಜ್ ಗೆ ಮುಖಭಂಗ

ರಾಜ್ಯದಲ್ಲಿ ಈಗ ವಿಧಾನಪರಿಷತ್ ಚುನಾವಣೆಯ ಭರಾಟೆ. ಪಕ್ಷಗಳು ಟಿಕೆಟ್ ಅಂತಿಮಗೊಳಿಸುತ್ತಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. 

ಮೈಸೂರು: ರಾಜ್ಯದಲ್ಲಿ ಈಗ ವಿಧಾನಪರಿಷತ್ ಚುನಾವಣೆಯ ಭರಾಟೆ. ಪಕ್ಷಗಳು ಟಿಕೆಟ್ ಅಂತಿಮಗೊಳಿಸುತ್ತಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. 

ಈ ಮಧ್ಯೆ ಮೈಸೂರಿನ ಜೆಡಿಎಸ್ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಗೆ ಎರಡನೇ ಬಾರಿ ಸ್ಪರ್ಧಿಸುವುದಕ್ಕೆ ಟಿಕೆಟ್ ಕೈತಪ್ಪಿದ್ದು ಭಾರಿ ನಿರಾಸೆಯಾಗಿದೆ. ನ.22 ರಂದು ಜೆಡಿಎಸ್ ಸೇರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಂಜೇಗೌಡ ಅವರಿಗೆ ಜೆಡಿಎಸ್ ನ ಟಿಕೆಟ್ ನೀಡಲಾಗಿದೆ. 

ಇದಕ್ಕೂ ಮುನ್ನ ಸಂದೇಶ್ ನಾಗರಾಜ್ ಬಿಜೆಪಿ ಸೇರಲು ಯತ್ನಿಸಿ ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ಜೆಡಿಎಸ್ ನಲ್ಲೇ ಮುಂದುವರೆಯಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಸೇರುವ ಉತ್ಸಾಹದಲ್ಲಿ ಜೆಡಿಎಸ್ ವಿರುದ್ಧ ತೀವ್ರ ಹೇಳಿಕೆಗಳನ್ನು ನೀಡಿದ್ದರು. 

ಸಂದೇಶ್ ನಾಗರಾಜ್ ಅವರ ಈ ನಡೆಯಿಂದ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೂ ನ.22 ರಂದು ಸಂದೇಶ್ ನಾಗರಾಜ್ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT