ಲಖನ್ ಜಾರಕಿಹೊಳಿ 
ರಾಜಕೀಯ

ಕುತೂಹಲಕ್ಕೆ ಕೊನೆಗೂ ತೆರೆ: ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿ ಮುಂದು?

ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿಯವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಬೆಳಗಾವಿ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿಯವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಇಂದು ಮೂವರು ಅಭ್ಯರ್ಥಿಗಳಾದ ಲಖನ್ ಜಾರಕಿಹೊಳಿ (ಸ್ವತಂತ್ರ ಅಭ್ಯರ್ಥಿ), ಮಹಾಂತೇಶ ಕವಟಗಿಮಠ (ಬಿಜೆಪಿ) ಮತ್ತು ಚನ್ನರಾಜ್ ಹಟ್ಟಿಹೊಳಿ (ಕಾಂಗ್ರೆಸ್)ಯವರು ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಮೂವರು ನಾಯಕರು ತಮ್ಮ ತಮ್ಮ ಬೆಂಬಲಿಗರ ಜೊತೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಲಖನ್ ಬೆಂಬಲಿಗರು ನೂರಾರು ವಾಹನಗಳಲ್ಲಿ ಬಂದು ಬೆಂಬಲ ಸೂಚಿಸುವ ನಿರೀಕ್ಷೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸರ್ದಾರ್ ಮೈದಾನದಿಂದ ಮಧ್ಯಾಹ್ನ ಪ್ರಾರಂಭವಾಗುವ ಮೆರವಣಿಗೆಯಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಜಾರಕಿಹೊಳಿ ಸಹೋದರರು ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ತಮ್ಮ ಎಲ್ಲಾ ಬೆಂಬಲಿಗರನ್ನು ಸಹೋದರನ ಪರವಾಗಿ ಒಗ್ಗೂಡಿಸುವ ಮೂಲಕ ಲಖನ್ ಅವರ ಗೆಲುವು ಖಚಿತಪಡಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡಿರುವ ಬಿಜೆಪಿಯ ದೊಡ್ಡ ಭಾಗದ ಸದಸ್ಯರು ಲಖನ್ ಅವರಿಗೆ ಬೆಂಬಲ ಸೂಚಿಸಲು ಮುಂದಾಗಿದ್ದಾರೆ.

ಜಾರಕಿಹೊಳಿ ಸಹೋದರರು ಚುನಾವಣೆಯಲ್ಲಿ ಗೆಲ್ಲುವುದಕ್ಕಿಂತ ಹೆಚ್ಚಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಹಟ್ಟಿಹೊಳಿ ಸೋಲನ್ನು ಖಚಿತಪಡಿಸಿಕೊಳ್ಳಲು ಲಖನ್ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಪಕ್ಷದ ಅಭ್ಯರ್ಥಿ ಹಟ್ಟಿಹೊಳಿ ಅವರು ನಾಮಪತ್ರ ಸಲ್ಲಿಸುವ ವೇಳೆ ನಡೆಯುವ ಮೆರವಣಿಗೆ ವೇಳೆ ಬೆಳಗಾವಿಯ ಕಾಂಗ್ರೆಸ್‌ನ ಹಲವಾರು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಿದ್ದು, ಟಿಕೆಟ್‌ ಕೈ ತಪ್ಪಿದ ಹಲವು ಆಕಾಂಕ್ಷಿಗಳೂ ಕೂಡ ಹಟ್ಟಿಹೊಳಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ಚುನಾವಣಾ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಹಾಲಿ ಎಂಎಲ್ಸಿ ಮಹಾಂತೇಶ ಕವಟಗಿಮಠ ಕೂಡ ಇಂದು ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?