ಚರ್ಚೆಯಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರು 
ರಾಜಕೀಯ

ಡಿಸೆಂಬರ್ 10ಕ್ಕೆ ವಿಧಾನ ಪರಿಷತ್ ಚುನಾವಣೆ: 121 ಅಭ್ಯರ್ಥಿಗಳು ಚುನಾವಣಾ ಸ್ಪರ್ಧಾ ಕಣದಲ್ಲಿ

ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದೆ. ನಿನ್ನೆ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿತ್ತು. ನಿನ್ನೆ ಸುಮಾರು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. 

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದೆ. ನಿನ್ನೆ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿತ್ತು. ನಿನ್ನೆ ಸುಮಾರು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. 

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಒಟ್ಟು 215 ನಾಮಪತ್ರಗಳ ಪ್ರತಿ ಸಲ್ಲಿಕೆಯಾಗಿದ್ದು ಅದರಲ್ಲಿ 119 ಮಂದಿ ಪುರುಷರು ಮತ್ತು ಇಬ್ಬರು ಮಹಿಳಾ ಅಭ್ಯರ್ಥಿಗಳಿದ್ದಾರೆ.

ಸ್ಥಳೀಯ ಸಂಸ್ಥೆಗಳ, ಪಟ್ಟಣ ಮತ್ತು ಗ್ರಾಮ ಪಂಚಾಯತ್, ಮುನ್ಸಿಪಾಲಿಟಿ ಮತ್ತು ನಗರ ಪಾಲಿಕೆ ಸದಸ್ಯರು ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಜನ ಸ್ವರಾಜ್ ಯಾತ್ರೆ ಹಾಗೂ ಪಕ್ಷದ ನಾಯಕರು ಜಿಲ್ಲಾ ಕೇಂದ್ರಗಳಲ್ಲಿ ಕಳೆದ ವಾರದಿಂದ ಸಭೆಗಳನ್ನು ನಡೆಸುವ ಮೂಲಕ ಬಿಜೆಪಿ ನಾಯಕರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಬಿಜೆಪಿಯಿಂದ 57 ಅಭ್ಯರ್ಥಿಗಳು ಕಣಕ್ಕಿಳಿದಿದ್ದರೆ, ಕಾಂಗ್ರೆಸ್ ನಿಂದ 56 ಮತ್ತು ಜೆಡಿಎಸ್ ನಿಂದ 17 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಇವರ ಜೊತೆಗೆ 68 ಮಂದಿ ಸ್ವತಂತ್ರ ಅಭ್ಯರ್ಥಿಗಳು ಹಾಗೂ ಆಮ್ ಆದ್ಮಿ ಪಕ್ಷ, ಜೆಡಿಯು, ಕರ್ನಾಟಕ ರಾಷ್ಟ್ರ ಸಮಿತಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಇತರ ಸಣ್ಣ ಪಕ್ಷಗಳಿಂದ ಸಹ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಹಲವು ಅಭ್ಯರ್ಥಿಗಳು ಸಚಿವರು ಮತ್ತು ಶಾಸಕರುಗಳಿಗೆ ಸಂಬಂಧಪಟ್ಟವರು. ಧಾರವಾಡದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರ ಸೋದರ ಪ್ರದೀಪ್ ಶೆಟ್ಟರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅಹ್ಮದ್ ಅವರು ಇತ್ತೀಚೆಗೆ ಹಾನಗಲ್ ಉಪ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದಾರೆ. ಶ್ರೀನಿವಾಸ್ ಮಾನೆ ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು. 

ಬಿಜೆಪಿಯ ಮುಖ್ಯ ಸಚೇತಕ ಮಹಂತೇಶ್ ಕಾವಟಗಿಮಠ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೋದರ ಚನ್ನರಾಜ್ ಹಟ್ಟಿಹೊಳಿ ಅವರ ವಿರುದ್ಧ ಬೆಳಗಾವಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮೇಲ್ಮನೆಯಾದ ವಿಧಾನ ಪರಿಷತ್ ನಲ್ಲಿ 75 ಸದಸ್ಯ ಬಲವನ್ನು ಹೊಂದಿದೆ. ಈಗ ಬಿಜೆಪಿಯ 32 ಸದಸ್ಯರು, ಕಾಂಗ್ರೆಸ್ ನ 29 ಮಂದಿ ಮತ್ತು ಜೆಡಿಎಸ್ ನ 12 ಮಂದಿ ಹಾಗೂ ಒಬ್ಬರು ಸ್ವತಂತ್ರ ಅಭ್ಯರ್ಥಿಯಿದ್ದಾರೆ. ಜೆಡಿಎಸ್ ಶಾಸಕ ಧರ್ಮೇಗೌಡ ಅವರ ನಿಧನ ಬಳಿಕ ಸ್ಥಾನ ಖಾಲಿಯಾಗಿ ಉಳಿದಿದೆ.

ವಿಜಯಪುರ, ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳಿಂದ ತಲಾ ಎರಡು ಮತ್ತು ಬೀದರ್, ಕಲಬುರಗಿ, ಉತ್ತರ ಕನ್ನಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಕೊಡಗು ಕ್ಷೇತ್ರಗಳಿಂದ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT