ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಗೆಲುವಿಗೆ ಯಡಿಯೂರಪ್ಪಗಾಗಿ ಎದುರು ನೋಡುತ್ತಿರುವ 'ಕಮಲ' ಕಲಿಗಳು!

ಡಿಸೆಂಬರ್ 10 ರಂದು ರಾಜ್ಯದ 25  ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.  ಈ ಚುನಾವಣೆ ಮಾಜಿ ಮತ್ತು ಹಾಲಿ ಸಿಎಂಗಳಿಗೆ ಸತ್ವ ಪರೀಕ್ಷೆಯಾಗಿದೆ.

ಮೈಸೂರು: ಡಿಸೆಂಬರ್ 10 ರಂದು ರಾಜ್ಯದ 25  ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಹಾಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಸತ್ವ ಪರೀಕ್ಷೆಯಾಗಿದೆ.

ಇತ್ತೀಚೆಗಷ್ಟೇ ಸಿಂದಗಿಯಲ್ಲಿ ಗೆದ್ದು ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಸೋತಿರುವ ಬಿಜೆಪಿ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕನಿಷ್ಠ 16 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಸಾಧಿಸಲು ರಾಜ್ಯಾದ್ಯಂತ ಸರಣಿ ಜನಸ್ವರಾಜ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ವರ್ಷ ಯಾವುದೇ ಸಮಯದಲ್ಲಿ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆಯಿದೆ, ಹೀಗಾಗಿ ಪರಿಷತ್ ಚುನಾವಣೆ ಫಲಿತಾಂಶ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚು ಶ್ರಮಿಸಲು ಪ್ರೇರೇಪಣೆ ನೀಡುತ್ತದೆ. 

ಶೇ.60 ರಷ್ಟು ಮತದಾರರು ಪಂಚಾಯಿತಿ ಚುನಾವಣೆಯಲ್ಲಿ ತಮ್ಮಹಕ್ಕು ಚಲಾಯಿಸಲಿದ್ದಾರೆ. ಬಿಜೆಪಿ ಕೇವಲ ನಗರ ಕೇಂದ್ರಿತ ಪಕ್ಷವಲ್ಲ. ಗ್ರಾಮೀಣ ಭಾಗದಲ್ಲಿಯೂ ಬಿಜೆಪಿಗೆ ಬೆಂಬಲವಿದೆ ಎಂಬುದನ್ನು ಸಾಬೀತು ಪಡಿಸಲು ಈ ಚುನಾವಣೆ ಸಹಾಯವಾಗಲಿದೆ.  ಇದು 2023ರ ವಿಧಾನಸಭೆ ಚುನಾವಣೆಗೂ ವೇದಿಕೆಯಾಗಲಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಅವರ ಲಿಂಗಾಯತ ಸಮುದಾಯದೊಂದಿಗಿನ ಅವರ ಪ್ರಭಾವನ್ನು ಬಳಸಿಕೊಳ್ಳಲು, ವಿಶೇಷವಾಗಿ ಹಳೇಯ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಲಗ್ಗೆ ಹಾಕಲು ಬಿಜೆಪಿ ಯತ್ನಿಸುತ್ತಿದೆ. ಕೇವಲ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಜೆಡಿಎಸ್ ಜೊತೆ ಯಡಿಯೂರಪ್ಪ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಾದೇಶಿಕ ಪಕ್ಷ ಜೆಡಿಎಸ್ -ಬಿಜೆಪಿಗೆ ಕೆಲವು ಸ್ಥಾನಗಳನ್ನು ನೀಡಬಹುದು, ಏಕೆಂದರೇ ಕಾಂಗ್ರೆಸ್ ಮತಗಳನ್ನು ಜೆಡಿಎಸ್ ಕಬಳಿಸಲಿದೆ.  ಕಳೆದ ಬಾರಿ ಮೈಸೂರಿನಲ್ಲಿ ನಡೆದ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಲ್ಪ ಮತಗಳ ಅಂತರದಿಂದ ಸೋತಿತ್ತು. ಆದಾಗ್ಯೂ, ಈ ಬಾರಿ ಅನುದಾನ ಮತ್ತು ಅಭಿವೃದ್ಧಿ ಕಾರ್ಯಗಳು ಹಳೆ ಮೈಸೂರು ಭಾಗದಲ್ಲಿ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ಬಿಜೆಪಿ ಮುಖಂಡ ಅಪ್ಪಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT