ಜಮೀರ್ 
ರಾಜಕೀಯ

ಬಿಜೆಪಿ-ಜೆಡಿಎಸ್ ನಡುವೆ ಒಪ್ಪಂದವಾಗಿದೆ: ಜಮೀರ್

ವಿಧಾನಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಿ.ಝಡ್.ಜಮೀರ್ ಅಹಮದ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಿ.ಝಡ್.ಜಮೀರ್ ಅಹಮದ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ 25 ಸ್ಥಾನಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬದಲು ಕೇವಲ ಏಳು ಸ್ಥಾನಗಳಲ್ಲಿ ಕಣಕ್ಕಿಳಿಸಿದೆ. ಇದು ಅನುಮಾನಗಳನ್ನು ಹುಟ್ಟಿಸಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಈ ಕುರಿತು ಸ್ಪಷ್ಟನೆ ನೀಡುವಂತೆ ಜೆಡಿಎಸ್'ಗೆ ಒತ್ತಾಯಿಸಿದ ಅವರು, ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಪಕ್ಷವು ಕೆಲವೇ ಸ್ಥಾನಗಳಿಗೆ ತನ್ನನ್ನು ಸೀಮಿತಗೊಳಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕ ಅಂಕಿ ಸ್ಥಾನಕ್ಕೆ ಇಳಿಯಲಿದೆ ಎಂದು ತಿಳಿಸಿದ್ದಾರೆ.

ಬಳಿಕ ತಮ್ಮ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ನಡುವಿನ ಭಿನ್ನಾಭಿಪ್ರಾಯದ ವದಂತಿಗಳನ್ನು ತಳ್ಳಿಹಾಕಿದ ಜಮೀರ್ ಅವರು, ಇತ್ತೀಚಿನ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರು ತಮ್ಮ ಪರವಾಗಿ ಘೋಷಣೆಗಳನ್ನು ಎತ್ತಿದ್ದರಿಂದ ಸಂತೋಷವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಳೆ ಪೀಡಿತ ಪ್ರದೇಶಗಳ ಪ್ರವಾಸಕ್ಕಾಗಿ ಮುಖ್ಯಮಂತ್ರಿಯನ್ನು ಟೀಕಿಸಿದ ಅವರು, ಇದು ಕೇವಲ "ಟೋಕನ್ ಗೆಸ್ಚರ್" ಆಗಿದೆ. ಇದರಿಂದ ಬೆಂಗಳೂರಿಗರಿಗೆ ಯಾವುದೇ ರೀತಿಯ ಸಹಾಯವಾಗುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT