ರಾಜಕೀಯ

ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ಸರ್ಕಾರ ಮರು ಆಲೋಚನೆ ಮಾಡಬೇಕಿದೆ: ಹೆಚ್.ಡಿ. ಕುಮಾರಸ್ವಾಮಿ

Manjula VN

ಬೆಂಗಳೂರು: ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರ್ಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರ್ಕಾರವೂ ಇಂತಹ ನಿಲುವಿಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ  ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿಯಾಗಿದೆ ಎಂದು ಹೇಳಿದ್ದಾರೆ.

ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ತಿಳಿಸಿದ್ದಾರೆ.

SCROLL FOR NEXT