ನಿಖಿಲ್ ಕುಮಾರ್ 
ರಾಜಕೀಯ

'ಮೂರು ಪಕ್ಷಗಳ ಹುನ್ನಾರದಿಂದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ 'ಅಭಿಮನ್ಯು' ಪಾತ್ರದಂತೆ ಏಕಾಂಗಿಯಾಗಿ ಹೋರಾಡಿ ಸೋತೆ'

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ರೈತ ಸಂಘ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ, ಸಂಚು ಮಾಡಿ ನನ್ನನ್ನು ಸೋಲಿಸಿದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ನೋವು ಹೊರ ಹಾಕಿದರು.

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ರೈತ ಸಂಘ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ, ಸಂಚು ಮಾಡಿ ನನ್ನನ್ನು ಸೋಲಿಸಿದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ನೋವು ಹೊರ ಹಾಕಿದರು.

ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ಅವರು ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದಂತೆ ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ, ಜೊತೆಗೆ ಮೂರು ಪಕ್ಷಗಳ ಮೂರು ಪಕ್ಷಗಳ ಹುನ್ನಾರದಿಂದ ಸೋಲಬೇಕಾಯಿತು ಎಂದು ಬೇಸರ ವ್ಯಕ್ತ ಪಡಿಸಿದರು.

ಮುಂಬರುವ ವಿಧಾನ ಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಪಕ್ಷ ಸಂಘಟನೆ ಆರಂಭಿಸಿದ್ದೇವೆ, ತಮ್ಮ ತಂದೆಯ ಕೆಲವು ಆಲೋಚನೆಗಳನ್ನು ಮುಂದಿನ ಚುನಾವಣೆಯಲ್ಲಿ ಅನುಷ್ಠಾನಗೊಳಿಸುತ್ತೇನೆ, ಜನರ ಕಷ್ಟಗಳನ್ನು ಆಲಿಸಲು ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ಇರಬೇಕೆಂದೇನಿಲ್ಲ, ಜನರಿಗೆ ಸಹಾಯ ಮಾಡುವ ಮನಸ್ಸಿದ್ದರೇ ಸಾಕು ಎಂದು ಹೇಳಿದ್ದಾರೆ.

ಮೂರು ಪಕ್ಷಗಳ ಹುನ್ನಾರದಿಂದ ನಾನು ಸೋಲಬೇಕಾಯಿತು. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರ ಒತ್ತಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ನನ್ನ ವಯಸ್ಸು ಇನ್ನೂ ಚಿಕ್ಕದಿದೆ. ಕಾರ್ಯಕರ್ತರು, ಮುಖಂಡರೊಂದಿಗೆ ಬೆರೆಯುವುದನ್ನು ತಂದೆ ಹಾಗೂ ತಾತಾ ಹೇಳಿಕೊಟ್ಟಿದ್ದಾರೆ ಎಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚಿತ್ರರಂಗದಲ್ಲಿ ತಕ್ಕಮಟ್ಟಿಗೆ ಯಶಸ್ಸು ಕಂಡಿದ್ದೇನೆ. ಇಂತಹ ಸಂದರ್ಭದಲ್ಲಿ ಪಕ್ಷ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಆಕಸ್ಮಿಕವಾಗಿ ಅಭ್ಯರ್ಥಿಯಾದೆ. ಸ್ಥಾನಮಾನಗಳು ಬೇಕೆಂದು ಹುಚ್ಚಿಡಿಸಿಕೊಂಡು ಅಭ್ಯರ್ಥಿಯಾಗಲಿಲ್ಲ. ನನಗೆ ಅಧಿಕಾರದ ಹುಚ್ಚಿದ್ದರೆ 2018 ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಆರ್ ಶಿವರಾಮೇಗೌಡ ಅವರಿಗೆ ಟಿಕೆಟ್ ಕೊಡದೆ ನಾನೇ ನಿಲ್ಲುತ್ತಿದ್ದೆ. ತಂದೆಯ ಹೆಸರಿನಿಂದ ಅಧಿಕಾರ ಹಿಡಿಯಬೇಕಾದ ಪರಿಸ್ಥಿತಿ ನನಗೆ ಬಂದಿಲ್ಲ ಅಂತ ನಿಖಿಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

SCROLL FOR NEXT