ಮುನಿರತ್ನ 
ರಾಜಕೀಯ

ಇನ್ನಷ್ಟು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ: ಮುನಿರತ್ನ

ಕೋಲಾರ ಕಾಂಗ್ರೆಸ್‌ನ ಇನ್ನೂ ಕೆಲವು ಪ್ರಮುಖ ನಾಯಕರು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷಕ್ಕೆ ಸೇರಲಿದ್ದಾರೆ ಎಂದು ತೋಟಗಾರಿಕೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸೋಮವಾರ ಹೇಳಿದ್ದಾರೆ.

ಕೋಲಾರ: ಕೋಲಾರ ಕಾಂಗ್ರೆಸ್‌ನ ಇನ್ನೂ ಕೆಲವು ಪ್ರಮುಖ ನಾಯಕರು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷಕ್ಕೆ ಸೇರಲಿದ್ದಾರೆ ಎಂದು ತೋಟಗಾರಿಕೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸೋಮವಾರ ಹೇಳಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಈಗಾಗಲು ಹಲವಾರು ನಾಯಕರು ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅಸಮಾಧಾನ ಹಿನ್ನೆಲೆಯಲ್ಲಿ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಿದರು.

ಕೋಲಾರ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಾರೆಡ್ಡಿ ಮತ್ತು ಎಐಸಿಸಿ ಮಾಜಿ ಸದಸ್ಯ ಎನ್ ಶ್ರೀನಿವಾಸ್ ಅವರು, ಬಿಜೆಪಿಗೆ ಸೇರ್ಪಡೆಯಾಗುವುದರಿಂದ ಕೋಲಾರ ಜಿಲ್ಲೆಯಲ್ಲಿ ಪಕ್ಷಕ್ಕೆ ಸಹಾಯವಾಗಲಿದೆ. ಇವರಿಬ್ಬರು ನಮ್ಮ ಪಕ್ಷ ಸೇರುವುದರಿಂದ ಜಿಲ್ಲಾ ಮಟ್ಟದಲ್ಲಿ ಬಿಜೆಪಿಗೆ ಲಾಭವಾಗಲಿದೆ. ಇಬ್ಬರೂ ನಾಯಕರು ಕೋಲಾರದ ಪ್ರಮುಖ ರಾಜಕಾರಣಿಗಳು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ರಾಜಕೀಯ ಮುಖಂಡರಿಗೆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಅಚ್ಚರಿಗಳು ಎದುರಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT