ಅರುಣ್ ಸಿಂಗ್ 
ರಾಜಕೀಯ

ಸಿಎಂ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಹಾನಗಲ್, ಸಿಂಧಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ, ಗೆಲ್ಲುವ ವಿಶ್ವಾಸ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂಬರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂಬರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಉಪ‌ ಚುನಾವಣೆಗೆ ಪ್ರಚಾರ ಮಾಡುತ್ತೇವೆ. ಉಪ‌ ಚುನಾವಣೆ ಜತೆಗೆ ಮುಂದಿನ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಇಂದು ಬಿಜೆಪಿ ಕೋರ್ ಕಮಿಟಿ ಸಭೆ ಇರುವುದರಿಂದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು, ಕೆಲಸಗಳ ಬಗ್ಗೆ ಪ್ರಚಾರ ಮಾಡುವ ಕೆಲಸ ಮಾಡ್ತೀವಿ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಅಭ್ಯರ್ಥಿಗಳ ನಿರ್ಧಾರ: ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗುವುದು. ಇಂದು 2 ಗಂಟೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!