ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ: ಸಿದ್ದರಾಮಯ್ಯ

ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ದುರುದ್ದೇಶದಿಂದಲೇ ಜೆಡಿಎಸ್ ಪಕ್ಷ ಆಯ್ದ ಚುನಾವಣಾ ಕ್ಷೇತ್ರದಲ್ಲಿ‌ ಮಾತ್ರ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುತ್ತದೆ. ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್‌ ಸೋಲಿಸಿದರು. ಈಗ ಸಿಂದಗಿಯಲ್ಲಿಯೂ ಇದನ್ನೇ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಡ್ಯ, ಮೈಸೂರು ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್‌ ನೀಡುವುದಿಲ್ಲ. ಬಿಜೆಪಿಗೆ ಅನುಕೂಲ ಮಾಡಿಕೊಡಲು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸುತ್ತಾರೆ ಎಂದು ದೂರಿದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಯಾರಾದರೂ ಮುಸ್ಲಿಮರನ್ನು ಮಂತ್ರಿ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್