ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ: ಕೊಲೆಗೆಡುಕ ಸರ್ಕಾರ ಅಸಹಾಯಕರ ನೆರವಿಗೆ ಧಾವಿಸಲಿ: ಎಚ್ ಡಿ ಕುಮಾರಸ್ವಾಮಿ

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ  ಅವರು,  ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರ್ಕಾರ' ಎಂದು ಕಿಡಿಕಾರಿದ್ದಾರೆ.

ಸರ್ಕಾರ ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಇಂಥವರ ನೆರವಿಗೆ ಧಾವಿಸಬೇಕಿತ್ತು. ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೇರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!