ಶ್ರೀನಿವಾಸ ಮಾನೆ, ಅಶೋಕ್ ಮನಗೊಳಿ 
ರಾಜಕೀಯ

ಹಾನಗಲ್, ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ.

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ. ಹಾನಗಲ್ ನಿಂದ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹಾಗೂ ಸಿಂದಗಿಯಿಂದ ಅಶೋಕ ಮನಗೊಳಿ ಅವರಿಗೆ ಟಿಕೆಟ್ ನೀಡಲಾಗಿದೆ.  

ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಎಂ. ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೊಳಿ ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರಿಗೆ ಟಿಕೆಟ್ ಎಂದು ಈ ಹಿಂದೆ ಮೌಖಿಕವಾಗಿ ಹೇಳಿಕೆ ನೀಡಲಾಗುತಿತ್ತು. ಆದರೆ, ಇಂದು ಅಧಿಕೃತವಾಗಿ ಅವರಿಗೆ ಟಿಕೆಟ್ ಘೋಷಿಸಲಾಗಿದೆ. 

ಇನ್ನೂ ಶ್ರೀನಿವಾಸ ಮಾನೆ 2018ರ ವಿಧಾನಸಭಾ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಅಂತಿಮವಾಗಿ ಮಾನೆ ಅವರಿಗೆ ಕಾಂಗ್ರೆಸ್ ವರಿಷ್ಠರು ಮಣೆ ಹಾಕಿದ್ದಾರೆ. ಅಕ್ಟೋಬರ್ 30 ರಂದು ಈ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video