ಸಿದ್ದರಾಮಯ್ಯ 
ರಾಜಕೀಯ

ರಾಷ್ಟ್ರ ರಾಜಕಾರಣ ಪ್ರವೇಶಿಸುವ ಯಾವುದೇ ಯೋಚನೆ ಇಲ್ಲ, ಕರ್ನಾಟಕದಲ್ಲೇ ಉಳಿಯುತ್ತೇನೆ: ಸಿದ್ದರಾಮಯ್ಯ

ರಾಷ್ಟ್ರ ರಾಜಕಾರಣದಲ್ಲಿ ತಮಗೆ ಯಾವುದೇ ಆಸಕ್ತಿ ಇಲ್ಲ ಮತ್ತು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ ತಾವು ಸೀಮಿತವಾಗುವುದಾಗಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮಗೆ ಯಾವುದೇ ಆಸಕ್ತಿ ಇಲ್ಲ ಮತ್ತು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ ತಾವು ಸೀಮಿತವಾಗುವುದಾಗಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ, ತಮಗೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ನೀಡಲಾಗಿದೆಯೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, "ಇಲ್ಲ, ರಾಷ್ಟ್ರ ರಾಜಕಾರಣ ಪ್ರವೇಶಿಸುವ ಯಾವುದೇ ಯೋಚನೆ ಇಲ್ಲ. ನಾನು ಕರ್ನಾಟಕದಲ್ಲಿಯೇ ಉಳಿಯುತ್ತೇನೆ ಎಂದರು.

ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಇದು ರಹಸ್ಯವಾಗಿ ಉಳಿದಿಲ್ಲ. 

ಸಿದ್ದರಾಮಯ್ಯ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಸೆಲ್ಫಿ ಕೇಳಿ ಬಂದ ಮಹಿಳಾ ಅಭಿಯಾನಿಯಿಂದ 'ಲಿಪ್ ಲಾಕ್': ತಬ್ಬಿಬ್ಬಾದ ಬಾಲಿವುಡ್ ನಟಿ ನಿಕಿತಾ ರಾವಲ್, Video ವೈರಲ್

ಕೋಲ್ಕತ್ತಾ ಬಳಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ: 'ಪ್ರಾಣವೇ ಹೋಗಬೇಕಾಗಿತ್ತು' ಎಂದ ಮಾಜಿ ಸಿಎಂ!