ರಾಜಕೀಯ

ಉಪ ಚುನಾವಣೆ ಪ್ರಚಾರಕ್ಕೆ ಸಮಯದ ನಿರ್ಬಂಧ, ಖರ್ಚು 30 ಲಕ್ಷ 80 ಸಾವಿರ ರೂ. ಮೀರುವಂತಿಲ್ಲ

Lingaraj Badiger

ಬೆಂಗಳೂರು: ರಾಜ್ಯದ ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ಸಮಯವನ್ನು ಕೋವಿಡ್-19 ಕಾರಣದಿಂದ ಸಂಜೆ 7ರಿಂದ ಬೆಳಗ್ಗೆ 10:00 ಗಂಟೆಯವರೆಗೆ ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಉಪ ಚುನಾವಣೆ ಮತ ಎಣಿಕೆಯ ದಿನ ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಅಧಿಕಾರಿ/ಸಿಬ್ಬಂಧಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೊರೊನಾ ಲಸಿಕೆಯ ಎರಡು ಲಸಿಕೆಗಳನ್ನು ಕಡ್ಡಾಯವಾಗಿ ಪಡೆದಿರಬೇಕು ಅಥವಾ ಒಂದು ಲಸಿಕೆ‌ ಪಡೆದವರು ಮತ ಎಣಿಕೆ ದಿನದ ಮುಂಚಿನ 72 ಗಂಟೆಯೊಳಗಿನ ಆರ್ ಟಿಪಿಸಿಆರ್ ಪ್ರಮಾಣ ಪತ್ರ ಅಥವಾ ಲಸಿಕೆಯನ್ನು ಪಡೆಯದವರು 48 ಗಂಟೆಯೊಳಗಿನ ಆರ್ ಟಿಪಿಸಿಆರ್ ಪ್ರಮಾಣಪತ್ರವನ್ನು ಸಂಬಂಧಿಸಿಧ ಮತ ಎಣಿಕೆ ಕೇಂದ್ರದ ಅಧಿಕಾರಿಗೆ ಸಲ್ಲಿಸಿ ಮತ ಎಣಿಕೆ ಕಾರ್ಯದಲ್ಲಿ ಭಾಗವಯಿಸಬಹುದು ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಇನ್ನೂ ಉಪಚುನಾವಣೆಯ ಅಭ್ಯರ್ಥಿಗಳ ಚುನಾವಣಾ ಒಟ್ಟು ಖರ್ಚನ್ನು 30,80,000 ರೂ.ಗಳಿಗೆ ಮಿತಿಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಇಂದು ತಮ್ಮ ಕಚೇರಿಯಲ್ಲಿ ಉಪ ಚುನಾವಣಾ ಪ್ರಚಾರ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಅಭ್ಯರ್ಥಿಗಳ ಚುನಾವಣಾ ಒಟ್ಟು ಖರ್ಚು ಮಿತಿಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿರುವುದನ್ನು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದರು.

SCROLL FOR NEXT