ವಿಜಯೇಂದ್ರ 
ರಾಜಕೀಯ

ಸಣ್ಣವರ ಲೂಟಿ ಇಷ್ಟಿರುವಾಗ ದೊಡ್ಡವರ ದರೋಡೆ ಎಸ್ಟಿರಬಹುದು? ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ವಿಸ್ತಾರ ಎಷ್ಟಿರಬಹುದು?

ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕನ ಮನೆ ಮೇಲೆ ನಡೆದ ಐಟಿ ದಾಳಿ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್  ಕಿಡಿಕಾರಿದೆ.

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕನ ಮನೆ ಮೇಲೆ ನಡೆದ ಐಟಿ ದಾಳಿ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್  ಕಿಡಿಕಾರಿದೆ.

ಸರ್ಕಾರದಲ್ಲಿ ಭ್ರಷ್ಟಾಚಾರ ಎಷ್ಟಿದೆ ಎಂದರೆ ವಿಧಾನಸೌಧದ ನೌಕರರು ಕೆಲಸ ಕೊಡಿಸುವ ಡೀಲಿಗಿಳಿಯುತ್ತಾರೆ. ಆರ್. ಅಶೋಕ್ ಹಾಗೂ ಶ್ರೀರಾಮುಲು ಸಹಾಯಕರು ವಸೂಲಿ, ಡೀಲ್‌ಗಳಲ್ಲಿ ತೊಡಗುತ್ತಾರೆ ಎಂದು ಟ್ವೀಟ್ ಮಾಡಿದೆ.

ಬಿಎಸ್ ಯಡಿಯೂರಪ್ಪ ಆಪ್ತ  ಸಹಾಯಕ 2000 ಕೋಟಿ ದೋಚುತ್ತಾನೆ. ಸಣ್ಣವರ ಲೂಟಿ ಇಷ್ಟಿರುವಾಗ ದೊಡ್ಡವರ ದರೋಡೆ ಎಸ್ಟಿರಬಹುದು? ಎಂದು ಪ್ರಶ್ನಿಸಿದೆ. ಯಡಿಯೂರಪ್ಪ ಅವರ ಆಪ್ತ ಸಹಾಯಕನ ಮೇಲಾದ ಐಟಿ ದಾಳಿಯೇ ಎಲ್ಲವನ್ನೂ ಹೇಳುತ್ತಿದೆ. ಸಾರಿಗೆ ನೌಕರನಾಗಿದ್ದವನು ಸಹಾಯಕನಾದ ಮಾತ್ರಕ್ಕೆ 2000 ಕೋಟಿ ಆಸ್ತಿಯ ಒಡೆಯ ಎಂದಾದರೆ, ರೈಸ್ ಮಿಲ್‌ನಲ್ಲಿ ಲೆಕ್ಕ ಬರೆಯುತ್ತಿದ್ದವರು ಇನ್ನೆಷ್ಟು ಕೋಟಿ ಒಡೆಯನಾಗಿರಬಹುದು ಎಂದು ಚಾಟಿ ಬೀಸಿದೆ.

ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿದ್ದು ಅವರ ಹಾಗೂ ಸಹಾಯಕರ ಭ್ರಷ್ಟಾಚಾರ ಮಿತಿ ಮೀರಿದ್ದಕ್ಕಾ? ಈಗಲಾದರೂ ಉತ್ತರಿಸಿ ,ಸಹಾಯಕರು, ಅಡುಗೆಯವರಿಂದ ಹಿಡಿದು ಮನೆಕೆಲಸದವರವರೆಗೂ ಕೋಟಿ ಕೋಟಿಗಳಲ್ಲಿ ಕೋಟೆ ಕಟ್ಟಿದ್ದಾರೆ ಎಂದಾದರೆ ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ಲೂಟಿಯ ಕಬಂದಬಾಹುಗಳ ವಿಸ್ತಾರ ಎಸ್ಟಿರಬಹುದು? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!