ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಸುಳ್ಳು ಹೇಳುವುದಕ್ಕೂ ಮಿತಿ ಇರಲಿ; ಡಿ.ಕೆ.ಶಿವಕುಮಾರ್ ರಿಂದ ಮನಗೂಳಿ ಗೆ ಅಪಚಾರ: ಎಚ್.ಡಿ.ಕುಮಾರಸ್ವಾಮಿ

ಸುಳ್ಳು ಹೇಳುವುದಕ್ಕೂ ಮಿತಿ ಇರಲಿ, ಕಾಂಗ್ರೆಸ್ ನಾಯಕರು ದಿವಂಗತ  ಶಾಸಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸುಳ್ಳು ಹೇಳುವುದಕ್ಕೂ ಮಿತಿ ಇರಲಿ, ಕಾಂಗ್ರೆಸ್ ನಾಯಕರು ದಿವಂಗತ  ಶಾಸಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರ ಹೇಳಿಕೆ ಇಂದು ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಎಚ್ ಡಿ ಕುಮಾರಸ್ವಾಮಿ, 'ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ'.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT