ಬಸವರಾಜ ಬೊಮ್ಮಾಯಿ 
ರಾಜಕೀಯ

 ಬಿಜೆಪಿ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೇ ದೇವದಾಸಿ, ಅಸ್ಪೃಶ್ಯತೆಯನ್ನು ಪುರಸ್ಕರಿಸಲಿದೆಯೇ?

ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಬೆಂಗಳೂರು: ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ಬಿಜೆಪಿ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೇ, ದೇವದಾಸಿ ಪದ್ಧತಿ, ಅಸ್ಪೃಶ್ಯತೆಯ ಆಚರಣೆ, ಬೆತ್ತಲೆ ಸೇವೆಯಂತಹ ಸಾಮಾಜಿಕ ಆಚರಣೆಗಳ ಹಿಂದಿದ್ದ 'ಭಾವನೆ'ಗಳನ್ನು ಪುರಸ್ಕರಿಸಲಾಗುತ್ತದೆಯೇ?' ಎಂದು ಪ್ರಶ್ನಿಸಿದೆ.

ಅನೈತಿಕ ಪೊಲೀಸ್‌ಗಿರಿ ಹೆಸರಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳಿಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರ ಕುಮ್ಮಕ್ಕಿನ ಹೇಳಿಕೆಯಿಂದ ಸಮಾಜಘಾತುಕ ಶಕ್ತಿಗಳಿಗೆ ಬಲ ಬಂದಿದೆ' ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. 

'ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸಗಳು ಈ ಸರ್ಕಾರದಿಂದ ಸಾಧ್ಯವಿಲ್ಲ ಎಂದು ನಿಶ್ಚಿತವಾಯ್ತು' ಎಂದು ಕೆಪಿಸಿಸಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video