ಸಿಎಂ ಬೊಮ್ಮಾಯಿ 
ರಾಜಕೀಯ

ಉಪ ಚುನಾವಣೆ ಪ್ರಚಾರ: ಅಕ್ಟೋಬರ್ 17ರಂದು ಸಿಂದಗಿಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ

ಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ.

ಬೆಂಗಳೂರು: ಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ.

ಈ ಬಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರಿಗೆ ಬೊಮ್ಮಾಯಿ ಸ್ಪಷ್ಟಪಡಿಸಿದರು. ಅಕ್ಟೋಬರ್ 17 ರಂದು ಸಿಂಧಗಿಗೆ ತೆರಳಿ ಅಲ್ಲಿ ಎರಡು ದಿನ ಪ್ರಚಾರದಲ್ಲಿ ತೊಡಗಿ ಬಳಿಕ ಹಾನಗಲ್‌ ಪ್ರಚಾರಕ್ಕೆ ತೆರಳುತ್ತೇನೆ. ಅ.20ರ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪರನ್ನು ಬೆಂಗಳೂರಿನ ಕೆ.ಕೆ.ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾದರು. ಉಪಚುನಾವಣಾ ಪ್ರಚಾರದ ವಿಚಾರವಾಗಿ ಬಿಎಸ್​ವೈ ಜತೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದ್ದಾರೆ. ಹಾನಗಲ್, ಸಿಂದಗಿ ಉಪಚುನಾವಣೆ ನಿಟ್ಟಿನಲ್ಲಿ ಅಕ್ಟೋಬರ್ 20ರ ಬಳಿಕ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಯಡಿಯೂರಪ್ಪಗೆ ದಸರಾ ಹಬ್ಬದ ಶುಭ ಕೋರಿದ ಸಿಎಂ
ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿದ್ದ ಸಿಎಂ ಬೊಮ್ಮಾಯಿ ಬಿಎಸ್ ವೈ ಅವರಿಗೆ ದಸರಾ ಹಬ್ಬದ ಶುಭ ಕೋರಿದರು. ಬಳಿಕ ಅವರ ಆಶೀರ್ವಾದ ಪಡೆದರು. ಈ ಬಗ್ಗೆ ಮಾತನಾಡಿದ ಅವರು, ಮೈಸೂರಿನಲ್ಲಿಂದು ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ. ನಾಳೆ (ಅಕ್ಟೋಬರ್ 16) ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ತೆರಳುತ್ತೇನೆ ಎಂದು ಹೇಳಿದರು.

ಅಂತೆಯೇ ಅಕ್ಟೋಬರ್ 17ರಂದು ಹಾನಗಲ್​ಗೆ ಹೋಗುತ್ತೇನೆ. ನಂತರ ಎರಡು ದಿನ‌ಗಳ ಕಾಲ ಸಿಂದಗಿಗೆ ತೆರಳುತ್ತೇನೆ. ಅ.20ರ ಬಳಿಕ ಹಾನಗಲ್, ಸಿಂದಗಿ ಎರಡೂ ಕಡೆ ಯಡಿಯೂರಪ್ಪ ಪ್ರಚಾರಕ್ಕೆ ಬರುತ್ತಾರೆ. ಶಾಸಕ ಮಸಾಲೆ ಜಯರಾಂ ಜೊತೆ ಈ ಸಂಬಂಧ ಮಾತನಾಡಿದ್ದೇನೆ. ಶಾಸಕ ಮಸಾಲೆ ಜಯರಾಂ ನಮ್ಮ ಒಳ್ಳೆಯ ಸ್ನೇಹಿತರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT