ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಿಂದ ಕಾಂಗ್ರೆಸ್-ಬಿಜೆಪಿ ತಲಾ ಒಬ್ಬ ಅಭ್ಯರ್ಥಿ

Shilpa D

ಬೆಳಗಾವಿ: ಬೆಳಗಾವಿಯಿಂದ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗಾಗಿ ಆಕಾಂಕ್ಷಿಗಳು ಟಿಕೆಟ್ ಗಾಗಿ ತೀವ್ರ ಲಾಬಿ ನಡೆಸುತ್ತಿದ್ದರೂ, ಕಾಂಗ್ರೆಸ್ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಲು ನಿರ್ಧರಿಸಿದೆ.

ಅದೇ ರೀತಿ ಬಿಜೆಪಿ ಕೂಡ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯಲ್ಲೂ, ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದವು ಮತ್ತು ಎರಡೂ ಪಕ್ಷಗಳು ಇತರ ಸ್ಥಾನಗಳಿಗೆ ಸ್ವತಂತ್ರರಿಗೆ ಬೆಂಬಲವನ್ನು ನೀಡಿದ್ದವು. ಅಂತಿಮವಾಗಿ, ಸ್ವತಂತ್ರ ಅಭ್ಯರ್ಥಿ ವಿವೇಕರಾವ್ ಪಾಟೀಲ್ ವಿಜಯಿಯಾದರು. ಆದರೆ ಬಿಜೆಪಿಯ ಮಹಾಂತೇಶ ಕವಟಗಿಮಠ ಇನ್ನೊಂದು ಸ್ಥಾನವನ್ನು ಗೆದ್ದರು. 

ರಾಜ್ಯದ ಐದು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಗೆ ನಡೆದ ಹೆಚ್ಚಿನ ಚುನಾವಣೆಗಳಲ್ಲಿ, ಬಿಜೆಪಿ ಅಥವಾ ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಾಗ ಅಪರೂಪವಾಗಿ ಎರಡೂ ಸ್ಥಾನಗಳನ್ನು ಗೆದ್ದಿವೆ. ಅದಕ್ಕಾಗಿಯೇ ಇಬ್ಬರೂ ತಲಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಉತ್ಸುಕರಾಗಿರಬಹುದು ಎಂದು ಮಹಾಂತೇಶ ಎಂ ಕವಟಗಿಮಠ ಹೇಳಿದರು.

ಎಂಎಲ್‌ಸಿ ಚುನಾವಣೆಯಲ್ಲಿ ಹಿಂದಿನ ದಾಖಲೆಯನ್ನು ಗಮನಿಸಿದರೆ, ಬಿಜೆಪಿ ಬೆಳಗಾವಿಯಿಂದ ತನ್ನ ಏಕೈಕ ಅಭ್ಯರ್ಥಿಯಾಗಿ ಕವಟಗಿ ಮಠ ಅವರನ್ನು ಕಣಕ್ಕಿಳಿಸುವುದು ಖಚಿತ ಎಂದು ಮೂಲಗಳು ತಿಳಿಸಿವೆ. ಬೆಳಗಾವಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಎರಡು ತಿಂಗಳ ನಂತರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ಹಲವಾರು ಜನಪ್ರಿಯ ಅಭ್ಯರ್ಥಿಗಳು ಪಕ್ಷದ ನಾಯಕತ್ವದ ಮೇಲೆ ಟಿಕೆಟ್ ಗಾಗಿ ಒತ್ತಡ ಹೇರುತ್ತಿದ್ದಾರೆ.

ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ನಮ್ಮದೇ ಪಕ್ಷದ (ಕಾಂಗ್ರೆಸ್) ನಾಯಕರ ನಡುವೆ ಸ್ಪರ್ಧೆ ನಡೆಯಲಿದೆ. ಅದಕ್ಕಾಗಿಯೇ ನಾವು ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸುತ್ತೇವೆ. ಈಗಾಗಲೇ ಐವರು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಕೆಲವು ನಾಯಕರ ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ಕಳೆದ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಒಂದೇ ಒಂದು ಎಂಎಲ್‌ಸಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಕಳೆದ ಚುನಾವಣೆಯಲ್ಲಿ ನಮ್ಮ ವಿರುದ್ಧ ಕೆಲಸ ಮಾಡಿದ ತಂಡವು ಕಾಂಗ್ರೆಸ್‌ನಿಂದ ಹೊರಬಂದಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT