ರಘು ಆಚಾರ್, ನವೀನ್, ಡಿಟಿ ಶ್ರೀನಿವಾಸ್ 
ರಾಜಕೀಯ

ದಾವಣಗೆರೆ: ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು, ಟಿಕೆಟ್ ಗಾಗಿ ಅಕಾಂಕ್ಷಿಗಳ ಲಾಬಿ

ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆ ಟಿಕೆಟ್ ಗಾಗಿ ದಾವಣಗೆರೆಯಲ್ಲಿ ಅಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. 

ದಾವಣಗೆರೆ: ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆ ಟಿಕೆಟ್ ಗಾಗಿ ದಾವಣಗೆರೆಯಲ್ಲಿ ಅಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. 

ಅನೇಕ ಆಕಾಂಕ್ಷಿಗಳು ಈಗಾಗಲೇ ಮತದಾರರನ್ನು ತಲುಪುತ್ತಿದ್ದಾರೆ. ಕಾಂಗ್ರೆಸ್‌ನ ಹಾಲಿ ಕೌನ್ಸಿಲ್ ಸದಸ್ಯ ಜಿ.ರಘು ಆಚಾರ್ ಹೊರತುಪಡಿಸಿ, ಬಿಜೆಪಿಯ ಕೆಎಸ್ ನವೀನ್ ಮತ್ತು ಜೆಡಿಎಸ್ ನ ಕೆಸಿ ವೀರೇಂದ್ರ ಎರಡನೇ ಬಾರಿ ತಮ್ಮ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಕಾಂಗ್ರೆಸ್ ನ ರಘು ಆಚಾರ್ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ.  ಆದರೆ ಎಸ್ ಆರ್ ಎಸ್  ಶಿಕ್ಷಣ ಸಂಸ್ಥೆಯ ಎಸ್ ಆರ್ ಲಿಂಗಾರೆಡ್ಡಿ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟಿದ್ದಾರೆ. 

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಪ್ರಬಲ ಲಿಂಗಾಯತ ಸಮುದಾಯದ ನವೀನ್ ಕೂಡ ಪ್ರಮುಖ ಆಕಾಂಕ್ಷಿಯಾಗಿದ್ದಾರೆ, ಆದರೆ ಅವರ ಹಾದಿ ಅಷ್ಟು ಸುಲಭವಾಗಿಲ್ಲ. ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಕೂಡ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ವೀರಶೈವ-ಲಿಂಗಾಯತರು ಇಲ್ಲಿಯವರೆಗೆ ಯಾವುದೇ ಸಮುದಾಯದವರನ್ನು ಪರಿಷತ್ತಿಗೆ ಆಯ್ಕೆ ಮಾಡಿಲ್ಲವಾದರೂ, ಈ ಬಾರಿ ಪರಿಸ್ಥಿತಿ ಬೇರೆಯದ್ದಾಗಿದೆ.

ಹಿಂದುಳಿದ ವರ್ಗಗಳ ನಾಯಕ ಡಿ ಟಿ ಶ್ರೀನಿವಾಸ್, ಇತ್ತೀಚೆಗೆ ನಡೆದ ಆಗ್ನೇಯ ಪದವೀಧರ ಕ್ಷೇತ್ರದಿಂದ ನಡೆದ ಕೌನ್ಸಿಲ್ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು, ಈಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.

ಶಾಸಕಾಂಗಕ್ಕೆ ಪ್ರವೇಶಿಸಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದು ನನ್ನ ಕನಸು. ಹಿಂದುಳಿದ ವರ್ಗಗಳನ್ನು ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳನ್ನು ಒಗ್ಗೂಡಿಸಲು ನಾನು ತಯಾರಿ ಮಾಡುತ್ತಿದ್ದೇನೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ನಾನು ಕೈಗೊಂಡ ಬಲವಾದ ಪ್ರಚಾರವು ನನಗೆ ಸಹಾಯ ಮಾಡುತ್ತದೆ. ಕೆ ಎಸ್ ನವೀನ್ ಹೇಳಿದ್ದಾರೆ, ಪಕ್ಷವು ನನಗೆ ಅವಕಾಶ ನೀಡಿದರೆ, ನಾನು ಗಣನೀಯ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ, ಈ ನಿಟ್ಟಿನಲ್ಲಿ ನಾನು ಈಗಾಗಲೇ ನನ್ನ ನೆಲದ ಕೆಲಸವನ್ನು ಆರಂಭಿಸಿದ್ದೇನೆ, ಬಿಜೆಪಿಯ ಅಭೂತಪೂರ್ವ ಬೆಂಬಲವು ನನಗೆ ಉತ್ತಮ ಮತಗಳ ಅಂತರದಲ್ಲಿ ಗೆಲ್ಲಲು ಸಹಾಯ ಮಾಡುತ್ತದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT