ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 
ರಾಜಕೀಯ

'ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ, ಡ್ರಗ್ ಪೆಡ್ಲರ್': ನಳೀನ್ ಕುಮಾರ್ ಕಟೀಲ್

ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಮತ್ತು ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

ಹುಬ್ಬಳ್ಳಿ: ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಮತ್ತು ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

ಮಂಗಳವಾರ ಇಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಟೀಲ್, "ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡಾಲರ್ ಆಗಿದ್ದಾರೆ. ಅವರು ಹೇಗೆ ದೇಶವನ್ನು ಮುನ್ನಡೆಸುತ್ತಾರೆ?" ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಯಕತ್ವ ರಹಿತವಾಗಿದೆ ಮತ್ತು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಡುವೆ ತೀವ್ರ ಸ್ಪರ್ಧೆ ಇತ್ತು. ಪಕ್ಷವನ್ನು ನಡೆಸಲು ಸಾಧ್ಯವಾಗದ ಈ ವ್ಯಕ್ತಿಗಳು ದೇಶವನ್ನು ಹೇಗೆ ನಡೆಸುತ್ತಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೂ ಜೈಲಿಗೆ ಹೋಗಿದ್ದರು. ಇತ್ತ ರಾಜ್ಯಾಧ್ಯಕ್ಷರು ತಿಹಾರ್ ಜೈಲಿಗೆ ಹೋಗಿದ್ದರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಜೈಲಿಗೆ ಹೋದ್ರಾ..? ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ..? ಇಂಥವರು ನಮ್ಮ ಮೋದಿ ಬಗ್ಗೆ ಟೀಕಿಸುತ್ತಾರೆ ಎಂದು ಕಿಡಿಕಾರಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಟರ್ಫ್ ವಾರ್ ಈಗಾಗಲೇ ಬಹಿರಂಗವಾಗಿದೆ. ಅವರು "ಜೋಡೆತ್ತು" ಅಲ್ಲ "ಕಾಡೆತ್ತು" ಎಂದು ವ್ಯಂಗ್ಯವಾಗಿ ಹೇಳಿದರು.
 
ಪ್ರಧಾನಿ ನರೇಂದ್ರ ಮೋದಿ ಅವರು "ಸಬ್ ಕಾ ಸಾಥ್, ಸಬ್ ಕಾ ವಿಕಾಸ್" ತತ್ವದ ಮೇಲೆ ರಾಷ್ಟ್ರವನ್ನು ಆಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು "ಮುಸ್ಲಿಂ ಕಾ ಸಾಥ್, ಮುಸ್ಲಿಂ ಕಾ ವಿಕಾಸ್" ಎಂಬ ನೀತಿಯೊಂದಿಗೆ ರಾಜ್ಯವನ್ನು ಆಳಿದರು ಎಂದು ಆರೋಪಿಸಿದರು.

ಪಂಜಾಬ್ ನಲ್ಲಿ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಅನ್ನು ಹಾಳು ಮಾಡುತ್ತಿದ್ದರೆ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಸಾಕು" ಎಂದು ಕಟೀಲ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ