ಕುಮಾರಸ್ವಾಮಿ 
ರಾಜಕೀಯ

ಮತ್ತೆ ಸಂಘಪರಿವಾರವನ್ನು ಕುಟುಕಿದ ಜೆಡಿಎಸ್

ಜೆಡಿಎಸ್ ಸದ್ಯಕ್ಕೆ ಸಂಘಪರಿವಾರದ ವಿರುದ್ಧ ಹಳಿಯುವುದನ್ನು ಬಿಡುವಂತೆ ಕಾಣುತ್ತಿಲ್ಲ. ಆರ್‌ಎಸ್‌ಎಸ್ ವಿರುದ್ಧ ಕುಟುಕುವುದನ್ನು ಮುಂದುವರೆಸಿದ್ದು, ಸಂಘ ಪರಿವಾರ ಇದೊಂದು ಸ್ವಯಂ ಘೋಷಿತ ಸೇವಾ ಸಂಸ್ಥೆ ಎಂದು ಮಂಗಳವಾರ ಹೇಳಿದೆ.

ಬೆಂಗಳೂರು: ಜೆಡಿಎಸ್ ಸದ್ಯಕ್ಕೆ ಸಂಘಪರಿವಾರದ ವಿರುದ್ಧ ಹಳಿಯುವುದನ್ನು ಬಿಡುವಂತೆ ಕಾಣುತ್ತಿಲ್ಲ. ಆರ್‌ಎಸ್‌ಎಸ್ ವಿರುದ್ಧ ಕುಟುಕುವುದನ್ನು ಮುಂದುವರೆಸಿದ್ದು, ಸಂಘ ಪರಿವಾರ ಇದೊಂದು ಸ್ವಯಂ ಘೋಷಿತ ಸೇವಾ ಸಂಸ್ಥೆ ಎಂದು ಮಂಗಳವಾರ ಹೇಳಿದೆ. 

ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ. ಆದರೆ ಬಿಜೆಪಿ ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ತನ್ನ ಅಧಿಕೃತ ಟ್ವೀಟರ್ ಮೂಲಕ ಜೆಡಿಎಸ್‌ ಸಾರಿದೆ. 

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ. ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. 

ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು?ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳು. ಪಿ.ಎಸ್.ಸಿ ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆಲ್ಲ ಇಲ್ಲ ಎಂದಿದ್ದಾರೆ.

ತಾವೆಂದೂ ಕೆ.ಪಿ.ಎಸ್.ಸಿ ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ತಮ್ಮದು ಸಂಘಿಗಳಂತೆ‌ ಗರ್ಭಗುಡಿ ಸಂಸ್ಕೃತಿ ಅಲ್ಲ. ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ಕೆ.ಪಿ.ಎಸ್.ಸಿ ಯನ್ನು ಹಾಳು ಮಾಡಿದ್ದು ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವುದು ಬಿಜೆಪಿಯ ನಡೆ ಎಂದು ಜೆಡಿಎಸ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್