ರಾಜಕೀಯ

ಪ್ರಧಾನಿ ಮೋದಿ ಹೆಬ್ಬೆಟ್ ಗಿರಾಕಿ: ಕಾಂಗ್ರೆಸ್ ಟ್ವೀಟ್'ಗೆ ಡಿಕೆಶಿ ವಿಷಾದ

Manjula VN

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದ್ದು, ಈ ಹೇಳಿಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಸಾಮಾಜಿ ಜಾಲತಾಣ ವಿಭಾಗದಿಂದ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 

ನಮ್ಮ ಹೋರಾಟ ಸದಾ ಜನಪರ, ನೈತಿಕ ಹಾಗೂ ಸೈದ್ಧಾಂತಿಕ ನೆಲೆಗಟ್ಟಿನಲ್ಲಿರುತ್ತದೆ. ತಾವು ಅಧಿಕಾರಕ್ಕೆ ಬಂದರೆ ಅಚ್ಛೇ ದಿನ್ ತರುವುದಾಗಿ ಹೇಳಿದ್ದ ಬಿಜೆಪಿ ಸರ್ಕಾರವನ್ನು ಉತ್ತರದಾಯಿಯನ್ನಾಗಿಸುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ. ಈ ಪ್ರಯತ್ನದಲ್ಲಿ ಇಂದಿನ ಅಪ್ರಬುದ್ಧ ಪದಬಳಕೆಗೆ ನಾವು ವಿಷಾದ ವ್ಯಕ್ತಪಡಿಸುತ್ತಾ, ಅದನ್ನು ಹಿಂಪಡೆದಿದ್ದೇವೆ ಎಂದು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ನಿನ್ನೆ ಟ್ವೀಟ್ ಮಾಡಿದ್ದ ರಾಜ್ಯ ಕಾಂಗ್ರೆಸ್, ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು. ಆದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಓದಲಿಲ್ಲ. ವಯಸ್ಕರಿಗೆ ಶಿಕ್ಷಣ ಯೋಜನೆಯನ್ನೂ ಮಾಡಿತ್ತು. ಆದರೂ ಓದಲಿಲ್ಲ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಹೇಳಿತ್ತು.

ಇದಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಹೇಳಿಕೆಗೆ ತಿರುಗೇಟು ನೀಡಿದ್ದ ಬಿಜೆಪಿ, ದೇಶದಲ್ಲಿ ಸಾಕಷ್ಟು ಶಾಲೆಗಳಿದ್ದವು. ಆದರೆ, 50 ವರ್ಷ ಮೇಲ್ಪಟ್ಟ ಅತಿ ಹಿರಿಯ ಯುವ ನಾಯಕ ಭಾರತದಲ್ಲಿ ಓದಲೇ ಇಲ್ಲ. ಭಾರತದಲ್ಲಿ ವಯಸ್ಕರ ಶಿಕ್ಷಣ ಯೋಜನೆಯಿಂದ್ದರೂ ಪಪ್ಪುವಿನ ಬುದ್ಧಿ ಬೆಳೆಯಲೇ ಇಲ್ಲ ಎಂದು ಹೇಳಿತ್ತು.

SCROLL FOR NEXT