ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ 
ರಾಜಕೀಯ

ನಳಿನ್ ಕುಮಾರ್ ಕಟೀಲ್ ಒಬ್ಬ ಅಯೋಗ್ಯ, ಅವಿವೇಕಿ; ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಂಗ್ರೆಸ್ ನಾಯಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಂಗ್ರೆಸ್ ನಾಯಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ನಳಿನ್ ಕುಮಾರ್ ಕಟೀಲ್ ಒಬ್ಬ ಅಯೋಗ್ಯ, ಅವಿವೇಕಿ, ಸಂಸ್ಕೃತಿ ಹೀನ ವ್ಯಕ್ತಿ. ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟಕೊಂಡಿದ್ದ ಎಂದು ಏಕವಚನದಲ್ಲಿಯೇ ಟೀಕಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಇತಿಹಾಸವನ್ನು ತೆಗೆದುಕೊಂಡರೆ, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಮದುವೆಯಾಗುವುದಾಗಿ ನಂಬಿಸಿ ಆಕೆಯ ಪತಿಗೆ ಬೆದರಿಕೆ ಹಾಕಿದ ವಿಚಾರದಲ್ಲಿ ಮಹಿಳೆ 2014ರಲ್ಲಿ ಪ್ರತಿಷ್ಠಿತ ಟಿವಿ ಚಾನೆಲ್ ವೊಂದರಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಆರೋಪಿಸಿದ್ದರು. ಇದು ನಳಿನ್ ಕುಮಾರ್ ಕಟೀಲ್ ಹಿನ್ನೆಲೆ. ಈ ಬಗ್ಗೆ ಸಾರ್ವಜನಿಕವಾಗಿಯೇ ಸಾಕ್ಷಿಗಳು ಸಿಗುತ್ತದೆ ಎಂದು ಆರೋಪಿಸಿದರು.

ಮತ್ತೊಂದು ಪ್ರಕರಣದಲ್ಲಿ ಮಂಗಳೂರಿನಲ್ಲಿ ವಿನಾಯಕ್ ಬಳಿಗಾರ್ ಹತ್ಯೆಯ ಪ್ರಮುಖ ಆರೋಪಿ ನರೇಶ್ ಶೆಣೈಅವರ ಖಾಸಾ ದೋಸ್ತಿ ನಳಿನ್ ಕುಮಾರ್ ಕಟೀಲು. ಇಂತಹ ವ್ಯಕ್ತಿಯಿಂದ ಸಂಸ್ಕೃತಿ, ಸಭ್ಯತೆಯನ್ನು ನಿರೀಕ್ಷಿಸುವುದು ಹೇಗೆ ಸಾಧ್ಯ ಎಂದು ಲಕ್ಷ್ಮಣ್ ಕೇಳಿದ್ದಾರೆ.

ನಳಿನ್ ಕುಮಾರ್ ಕಟೀಲ್ ನಾಲಿಗೆಯನ್ನು ಬಿಗಿಹಿಡಿದು ಮಾತನಾಡಬೇಕು. ಕಾಂಗ್ರೆಸ್ ಪಕ್ಷದ ವೈಫಲ್ಯ, ಸಮಸ್ಯೆಗಳನ್ನು ಪ್ರಸ್ತಾಪಿಸಲಿ, ಚರ್ಚೆಗೆ ಆಹ್ವಾನಿಸಲಿ, ಅವರ ಸಾಧನೆಗಳಿದ್ದರೆ ಹೇಳಿಕೊಳ್ಳಲಿ. ಅದು ಬಿಟ್ಟು ಕಾಲ್ಪನಿಕ ವರದಿಗಳ ಆಧಾರದ ಮೇಲೆ ನಮ್ಮ ನಾಯಕ ರಾಹುಲ್ ಗಾಂಧಿಯವರ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ, ಇದೇ ರೀತಿ ಮುಂದುವರಿದರೆ ಕಟೀಲು ಅವರ ಕಚೇರಿ, ಮನೆ ಮುಂದೆ ಧರಣಿ, ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಾದಕ ವಸ್ತುಗಳ ಸೇವನೆ, ಬಳಕೆ, ಸಂಗ್ರಹ ಬಗ್ಗೆ ತನಿಖೆ ನಡೆಸಲು ಎನ್ ಸಿಬಿ ಇದೆ, ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ, ರಾಹುಲ್ ಗಾಂಧಿಯವರು ಡ್ರಗ್ ಪೆಡ್ಲರ್ ಆದರೆ ತನಿಖೆ ಮಾಡಿಸಬಹುದಲ್ಲವೇ ಎಂದು ಕೂಡ ಲಕ್ಷ್ಮಣ್ ನಳಿನ್ ಕುಮಾರ್ ಕಟೀಲರಿಗೆ ಸವಾಲು ಎಸೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!