ಹಾನಗಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ದುಡ್ಡು ಕೊಟ್ಟಲ್ಲ, ನಾವು ಜನರ ಮನಸ್ಸು ಗೆಲ್ಲುವ ಮೂಲಕ ಉಪಚುನಾವಣೆ ಗೆಲ್ಲುತ್ತೇವೆ: ಸಿದ್ಧುಗೆ ಬೊಮ್ಮಾಯಿ ತಿರುಗೇಟು

ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾನಗಲ್: ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದಲ್ಲಿ ನಡೆಸುತ್ತಿರುವ ವಾಕ್ಸಮರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಾದವನ್ನು ಮಾಡದೆ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ಜನರ ಪ್ರೀತಿ ವಿಶ್ವಾಸ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತಿದ್ದೇವೆ. ಅದೇ ನಮಗೆ ಶಕ್ತಿ ಎಂದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಉತ್ತರ ಕರ್ನಾಟಕದ ಬಗ್ಗೆ ಇರದ ಕಾಳಜಿ ಈಗ ತೋರಿಸುತ್ತಿದ್ದಾರೆ. ಇವರ ಬಣ್ಣದ ಮಾತುಗಳಿಗೆ ಜನ ಮರುಳಾಗಬಾರದೆಂದು ತಿರ್ಮಾನ ಮಾಡಿದ್ದಾರೆ. ವಾಸ್ತವತೆಯನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳದೆ ವ್ಯರ್ಥವಾಗಿ ವಾದ ಮಾಡುತ್ತಿದೆ ಎಂದರು.

ಉಪಚುನಾವಣೆಗೋಸ್ಕರ ಬಿಜೆಪಿ ಬಹಳಷ್ಟು ಹಣವನ್ನು ಖರ್ಚು ಮಾಡುತ್ತಿದೆ. ಇನ್ನು ಪ್ರತಿ ಓಟಿಗೆ 2,000 ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು  ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT