ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ಸಿದ್ದರಾಮಯ್ಯರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲಾಗಿವೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ವಾಕ್ಸಮರ ನಡೆಸಿದರು.

ಹಾನಗಲ್: ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ವಾಕ್ಸಮರ ನಡೆಸಿದರು.

 ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿಂದು  ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿ ಮಾಡಿದ ನಂತರವೇ ಜನ ಅಕ್ಕಿ ನೋಡಿದ್ದಾರೆ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಅಕ್ಕಿಯಲ್ಲಿ‌ ಕೇಂದ್ರದ ಪಾಲು ಹೆಚ್ಚು. ರಾಜ್ಯ ಸರ್ಕಾರದ ಪಾಲು ಪ್ರತಿ ಕೆಜಿಗೆ ಕೇವಲ 3 ರೂಪಾಯಿ. ಆದರೆ ಅನ್ನಭಾಗ್ಯ ಯೋಜನೆ ತಮ್ಮದೆಂದು ಹೇಳಿಕೊಳ್ಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ರೈತರ ಪರವಾಗಿರಲಿಲ್ಲ, ರೈತರನ್ನು ಉದ್ಧಾರ ಮಾಡುವ ಮನಸ್ಥಿತಿ ಅವರಿಗಿಲ್ಲ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುವುದೇ ಕಾಂಗ್ರೆಸ್ ಕೆಲಸ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ವಿರೋಧ ಪಕ್ಷದ ಎಲ್ಲ ಟೀಕೆ-ಟಿಪ್ಪಣಿಗಳಿಗೆ ನಾನು ಉತ್ತರಕೊಡಲು ಬಯಸುವುದಿಲ್ಲ. ನಮ್ಮ ಮೂಲಮಂತ್ರ ಅಭಿವೃದ್ಧಿಯಾಗಿದ್ದು, ಕಾಂಗ್ರೆಸ್ ಪಕ್ಷದವರು ತಮಗೆ ಬೇಕಾದ ಅಜೆಂಡಾ ಇಟ್ಟುಕೊಳ್ಳಲಿ. ಆದರೆ ಭಾರತೀಯ ಜನತಾ ಪಕ್ಷದ ಏಕೈಕ ಅಜೆಂಡಾ ಅಭಿವೃದ್ಧಿ. ಕಾಂಗ್ರೆಸ್ ಪಕ್ಷ ಮಾಡುವಂತಹ ಎಲ್ಲ ಟೀಕೆಗಳಿಗೆ ಹಾನಗಲ್ ಕ್ಷೇತ್ರದ ಜನ ಉತ್ತರ ಕೊಡಲಿದ್ದಾರೆ ಎಂದರು.

ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ಯಡಿಯೂರಪ್ಪ ಅವರು ಕಾಲಿಟ್ಟಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬೊಮ್ಮಾಯಿಯವರು ಉಚ್ಚರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪನವರು ಪರಿಚಯಿಸಿದ ಎಲ್ಲಾ ಯೋಜನೆಗಳ ಹಿಂದೆ ಬಲವಾದ ಸಾಮಾಜಿಕ ಅಭಿವೃದ್ಧಿಗೆ ಕಳಕಳಿ ಮತ್ತು ಕಾಳಜಿ ಇತ್ತು ಎಂದು ಬೊಮ್ಮಾಯಿ ಅವರು ಹಾನಗಲ್ ಪ್ರಚಾರದ ಸಂದರ್ಭದಲ್ಲಿ ಹೇಳಿದರು.

ನಮ್ಮ ರೈತರು ಅಭಿವೃದ್ಧಿ ಹೊಂದಬೇಕು ಹಣಗಳಿಸಬೇಕು. ಕಾಲಿನಲ್ಲಿ ಜೂರ್ಕಿ ಚಪ್ಪಲಿ, ರೇಷ್ಮೆ ಜುಬ್ಬಾ,, ರೇಷ್ಮೆ ರುಮಾಲು ಹಾಕಬೇಕು, ಕೈಯಲ್ಲಿ ಬಾರಕೋಲು ಹಿಡಿದುಕೊಳ್ಳಬೇಕು ಇದು ಭಾರತೀಯ ಜನತಾ ಪಕ್ಷದ ಅಭಿವೃದ್ಧಿಯ ಕನಸು. ರೈತರ ಜೀವನ ಸುಧಾರಿಸುವುದೇ ನಮ್ಮ ಉದ್ದೇಶ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್