ಕೆಎಸ್ ಈಶ್ವರಪ್ಪ 
ರಾಜಕೀಯ

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ಸಮಾವೇಶ: ಸಚಿವ ಈಶ್ವರಪ್ಪ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಹಿಂದುಳಿದ ಸಮಾಜಗಳ ಮಾಜಿ...

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಹಿಂದುಳಿದ ಸಮಾಜಗಳ ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಮಾಜಿ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ವತಿಯಿಂದ ಬೆಂಗಳೂರಿನ ವಸಂತ್ ನಗರದ “ಅಂಬೇಡ್ಕರ್ ಭವನ”ದಲ್ಲಿ ಇಂದು ನಡೆದ “ಕಾರ್ಯಕರ್ತರ ಸಮಾವೇಶದ” ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು, ಒಬಿಸಿ ಮೋರ್ಚಾ ಪದಾಧಿಕಾರಿಗಳು ಸೇರಿ ಸುಮಾರು 2ರಿಂದ 2,500 ಜನರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಮಾವೇಶಕ್ಕೆ ಅರ್ಹರನ್ನು ಗುರುತಿಸಿ ಆಹ್ವಾನಿಸುವ ಕೆಲಸವನ್ನು ಮಾಡಬೇಕು. ಇದು ಸಂಘಟನೆಯ ಮೊದಲನೇ ಪ್ರಯತ್ನ ಎಂದರು. ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಸೌಲಭ್ಯಗಳನ್ನು ನೀಡುತ್ತಿವೆ. ಅವುಗಳ ಬಗ್ಗೆ ತಿಳಿದುಕೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಹೇಳಿದರು.

ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಗರಿಷ್ಠ ಸಂಖ್ಯೆಯ ಹಿಂದುಳಿದ ಸಮಾಜದವರು ಮತ್ತು ದಲಿತರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿ, ಇದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಸಮರ್ಪಿಸಿದರು. ಬಿಜೆಪಿ ಹಿಂದೆಯೂ ಹಿಂದುಳಿದ ಸಮಾಜಗಳ ಮಠಗಳಿಗೆ 100 ಕೋಟಿ ಅನುದಾನ ನೀಡಿದೆ ಎಂದು ವಿವರಿಸಿದರು. ಇದರಿಂದ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್, ಆಸ್ಪತ್ರೆ ಸೇರಿದಂತೆ ವಿವಿಧ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳೂ ನಡೆದಿವೆ ಎಂದರು.

ಒಂದು ಕಾಲದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರು ಕಾಂಗ್ರೆಸ್ ಜೊತೆಗಿದ್ದರು. ಕಾಂಗ್ರೆಸ್ ಜಾತಿ, ಮತ ರಾಜಕೀಯವನ್ನು ನೆಚ್ಚಿಕೊಂಡಿದೆ. ಈಗ ಹಿಂದುಳಿದವರು ಮತ್ತು ದಲಿತರಲ್ಲಿ ಶೇ 70ಕ್ಕೂ ಹೆಚ್ಚು ಜನರು ಬಿಜೆಪಿ ಜೊತೆಗಿದ್ದಾರೆ. ರಾಷ್ಟ್ರೀಯವಾದ ಮುಸ್ಲಿಮರು ಬಿಜೆಪಿ ಜೊತೆಗಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ!

'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ' ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು ಎಂಟ್ರಿಯಾದ ಗುರು!

Kurnool Bus Fire- ಬಸ್ಸಿನ ಸೀಟುಗಳನ್ನು ಅಕ್ರಮವಾಗಿ ಸ್ಲೀಪರ್ ಕೋಚ್ ಆಗಿ ಮಾರ್ಪಡಿಸಲಾಗಿತ್ತು: ದಾಖಲೆಗಳಿಂದ ಬಹಿರಂಗ

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣ ಭೈರೇಗೌಡ ಅಚ್ಚರಿ ಹೇಳಿಕೆ !

SCROLL FOR NEXT