ಕುಮಾರಸ್ವಾಮಿ 
ರಾಜಕೀಯ

ಎಂಎಲ್ ಸಿ ಚುನಾವಣೆ: ಚದುರಿಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವುದೇ ಜೆಡಿಎಸ್ ಗೆ ಸದ್ಯದ ಸವಾಲು!

ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಖಾರವಾಗಿಯ ಪ್ರತಿಕ್ರಿಯಿಸಿದ್ದರು.

ಬೆಂಗಳೂರು: ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಖಾರವಾಗಿಯ ಪ್ರತಿಕ್ರಿಯಿಸಿದ್ದರು.

ಹಳೇಯ ಮೈಸೂರು ಪ್ರದೇಶದಲ್ಲಿ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ  ತುಮಕೂರಿನ ಒಕ್ಕಲಿಗ ನಾಯಕ ಬಿಇಎಂಎಲ್ ಕಾಂತರಾಜು ಕಾಂಗ್ರೆಸ್ ನ ಪ್ರಭಾವಿ ನಾಯಕರ ಜೊತೆ ಸಭೆ ನಡೆಸಿದ್ದಾರೆ. ನಾನು ನನ್ನ ರಾಜಕೀಯ ವೃತ್ತೀ ಜೀವನವನ್ನು ರೂಪಿಸಿಕೊಳ್ಳಬೇಕಾಗಿದೆ, ಈಗಾಗಲೇ ನಾನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದಾರೆ.

ಆದರೆ ಮುಂಬರುವ ಚುನಾವಣೆಗೂ ಮೊದಲು ಕೆಲವು ಜೆಡಿಎಸ್ ನಾಯಕರು ತಮ್ಮ ರಾಜಕೀಯ ನಡಡೆಗಳನ್ನು ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಮುಂದಿನ ವರ್ಷ ನಗರ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿವೆ. 25 ಎಂಎಲ್ ಸಿಗಳ ಅವಧಿ ಜನವರಿ 2022 ರಲ್ಲಿ ಕೊನೆಗೊಳ್ಳುತ್ತದೆ.

ಕಾಂತರಾಜು ಅವರು ಎಂಎಲ್‌ಸಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಬದಲಿಗೆ ತುರುವೇಕೆರೆಯಿಂದ ವಿಧಾನಸಭೆಗೆ ಪ್ರವೇಶಿಸುವ ಉದ್ದೇಶ ಹೊಂದಿದ್ದಾರೆ. ಕಾಂತರಾಜು ಜೆಡಿಎಸ್ ನಿಂದ ನಿರ್ಗಮಿಸುವುದರಿಂದ ರಾಜಕೀಯ ಧ್ರುವೀಕರಣಕ್ಕೆ ಎಡೆಮಾಡಿಕೊಡಬಹುದು. ಏಕೆಂದರೆ ಹಳೆಯ ಮೈಸೂರು ಪ್ರದೇಶದಲ್ಲಿ ಪಕ್ಷದಿಂದ ಹೆಚ್ಚಿನ ಒಕ್ಕಲಿಗ ನಾಯಕರು 2023 ರ
ಚುನಾವಣೆಗೆ ಮುನ್ನ ಕಾಂಗ್ರೆಸ್ ಅಥವಾ ಬಿಜೆಪಿ ಸೇರಬಹುದು.

ಚಾಮುಂಡೇಶ್ವರಿ ಶಾಸಕ ಜಿ ಟಿ ದೇವೇಗೌಡ, ಒಕ್ಕಲಿಗ ಸಮುದಾಯದ ಜೆಡಿಎಸ್ ಬಲಿಷ್ಠ, ಅವರು ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ, ಜಿಟಿಡಿ ತಮ್ಮ ಮಗನನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಜೆಡಿಎಸ್‌ನ ಮಾಜಿ ಶಾಸಕ ವೈಎಸ್‌ವಿ ದತ್ತಾ ಅವರು ಬುಧವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿ.ಟಿ ದೇವೇಗೌಡರು ಪಕ್ಷಕ್ಕೆ ಆಸ್ತಿಯಾಗಿದ್ದು, ಅವರನ್ನು ಹೋಗಲು ಬಿಡಬಾರದು ಎಂದಿದ್ದಾರೆ.  ಅಲ್ಲದೆ, ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಕೂಡ ಶಿವಕುಮಾರ್ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಪಕ್ಷ ತೊರೆಯಲು ಇಚ್ಚಿಸುವವರು ಬಿಡಬಹುದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂತಹ ಬೆಳವಣಿಗೆಗಳು ಎಂಎಲ್‌ಸಿ ಚುನಾವಣೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳ ಮೇಲೆ ಪರಿಣಾಮ ಬೀರಬಹುದು. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಮೂರು ದೊಡ್ಡ ರಾಜಕೀಯ ಪಕ್ಷಗಳು ತಮ್ಮ ಸ್ಥಳೀಯ ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳನ್ನು ಇರಿಸಿಕೊಳ್ಳಲು ಈ ಚುನಾವಣೆಗಳು ನಿರ್ಣಾಯಕವಾಗಿವೆ. ಚುನಾವಣೆ ನಡೆಯುವ 25 ಎಂಎಲ್‌ಸಿ ಸ್ಥಾನಗಳಲ್ಲಿ, ಕಾಂಗ್ರೆಸ್ 14, ಆರು ಬಿಜೆಪಿ ಮತ್ತು ನಾಲ್ಕು ಜೆಡಿಎಸ್. ಒಬ್ಬ ಸ್ವತಂತ್ರರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ಜೂನ್ 2022 ರಲ್ಲಿ ನಡೆಯಲಿರುವ 25 ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಕೆಲವು ಬಿಜೆಪಿ ಆಕಾಂಕ್ಷಿಗಳು ಕೂಡ ಈಗಾಗಲೇ ಮತದಾರರನ್ನು ಭೇಟಿ ಮಾಡಲು ಆರಂಭಿಸಿದ್ದಾರೆ. ಬಿಜೆಪಿ ದಕ್ಷಿಣ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ ಇ ಸಿ ನಿಂಗರಾಜ ಗೌಡ, ಇತ್ತೀಚೆಗೆ ಮೈಸೂರಿನಲ್ಲಿ ಪೂರ್ವಭಾವಿ ಸಭೆ ನಡೆಸಿದ್ದರು ಮತ್ತು ಶೀಘ್ರದಲ್ಲೇ ಹಾಸನದಲ್ಲಿ ಇದೇ ರೀತಿಯ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT