ಸಿದ್ದರಾಮಯ್ಯ 
ರಾಜಕೀಯ

'ಎನ್ ಇಪಿ ಜಾರಿ ನಿರ್ಧಾರ ಹಿಂಪಡೆಯಿರಿ': ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಜಾರಿಗೊಳಿಸುವ ನಿರ್ಧಾರ ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯನ್ನು ಜಾರಿಗೊಳಿಸುವ ನಿರ್ಧಾರ ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಿಕ್ಷಣದ ಮೂಲಕ ಕೋಮುವಾದದ ಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದು ಎನ್ ಇಪಿ ಹಿಂದಿನ ಉದ್ದೇಶವಾಗಿದೆ ಮತ್ತು ಇದು ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಮೇಲೆ ರಾಜ್ಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಅವರ ಕಚೇರಿಯಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸುವ ಸಂಬಂಧ ಅಪಾಯಿಂಟ್ಮೆಂಟ್ ಕೋರಿ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ತಜ್ಞರು ಅಥವಾ ವಿರೋಧ ಪಕ್ಷಗಳೊಂದಿಗೆ ಯಾವುದೇ ಚರ್ಚೆಯಿಲ್ಲದೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಈ ನೀತಿಯನ್ನು ಜಾರಿಗೆ ತರಲು ಸರ್ಕಾರ ಈಗಾಗಲೇ ನಿರ್ಧರಿಸಿದೆ ಮತ್ತು ಉದ್ಘಾಟಿಸಿರುವುದನ್ನು ಗಮನಿಸಬೇಕು ಎಂದರು.

ಎನ್ ಇಪಿ ಅನುಷ್ಠಾನ ಉದ್ಘಾಟಿಸಿದ ನಂತರ ಈಗ ಚರ್ಚೆಗೆ ಕರೆಯುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಅಶ್ವಥ್ ನಾರಾಯಣ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಲ್ಲಿ ನೀತಿಯ ಬದಲಾವಣೆಯು ಸಣ್ಣ ವಿಷಯಗಳಲ್ಲ ಎಂದು ತಿಳಿಸಿದ ಅವರು, ವ್ಯಾಪಕವಾದ ಪರಿಣಾಮಗಳೊಂದಿಗೆ ಇಂತಹ ನೀತಿಗಳನ್ನು ರೂಪಿಸುವ ಮೊದಲು ವಿವರವಾದ ಚರ್ಚೆಗಳನ್ನು ಪ್ರಜಾಸತ್ತಾತ್ಮಕವಾಗಿ ಆರಂಭಿಸಬೇಕಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್