ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಚುನಾವಣೆಗೆ ಮುನ್ನ ಜಾತಿ ಜಪ, ಹತ್ತಿರ ಬರುತ್ತಿದ್ದಂತೆ‌ ಪ್ರಕೃತಿ ಚಿಕಿತ್ಸೆ: ಪಕ್ಷ ಸಂಘಟನೆಗೆ ಎಷ್ಟೇ ಬೆವರು ಹರಿಸಿದರೂ ಫಲಿತಾಂಶ ಶೂನ್ಯ!

ಹುಬ್ಬಳ್ಳಿ– ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರ ನಡೆ ಕುರಿತು ಬಿಜೆಪಿ ಟೀಕಿಸಿದೆ. 

ಬೆಂಗಳೂರು: ಹುಬ್ಬಳ್ಳಿ– ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರ ನಡೆ ಕುರಿತು ಬಿಜೆಪಿ ಟೀಕಿಸಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ‘ಡಿ.ಕೆ.ಶಿವಕುಮಾರ್ ಅವರೇ, ಪಕ್ಷ ಸಂಘಟನೆಗೆ ನೀವು ಎಷ್ಟೇ ಬೆವರು ಹರಿಸಿದರೂ ಫಲಿತಾಂಶ ಶೂನ್ಯ ಎಂಬುದು ಈಗಲಾದರೂ ಅರ್ಥವಾಯ್ತೇ? ಚುನಾವಣೆಗೆ ಮುನ್ನ ಜಾತಿ ಜಪ, ಚುನಾವಣೆ ಹತ್ತಿರ ಬರುತ್ತಿದ್ದಂತೆ‌ ಪ್ರಕೃತಿ ಚಿಕಿತ್ಸೆ. ಒಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಬಗಲಿನಲ್ಲೇ ಶತ್ರು ಪಡೆ ಬೇರೂರಿರುವುದು ಮತ್ತೊಮ್ಮೆ ಸಾಬೀತಾಗಿದೆ’ ಎಂದು ವ್ಯಂಗ್ಯವಾಡಿದೆ.

‘ಸಿದ್ದರಾಮಯ್ಯನವರೇ, ನೀವು ಕಾಂಗ್ರೆಸ್ ಪಕ್ಷದ ಗೆಲುವಿಗೆ ತಂತ್ರಗಾರಿಕೆ ರೂಪಿಸುತ್ತೀದ್ದೀರೋ ಅಥವಾ ಭ್ರಷ್ಟಾಧ್ಯಕ್ಷ ಡಿಕೆಶಿ ಪದಚ್ಯುತಿಗೆ ಪ್ರಯತ್ನಿಸುತ್ತಿದ್ದೀರೋ? ನಿಮ್ಮ ಉದ್ದೇಶ ಸ್ಪಷ್ಟಪಡಿಸಿ’ ಎಂದು ಬಿಜೆಪಿ ಮತ್ತೊಂದು ಟ್ವೀಟ್‌ ಮಾಡಿದೆ. 

ಸೆ.3 ರಂದು ನಡೆದ ಪಾಲಿಕೆಗಳ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಲ್ಪತೃಪ್ತಿಗೆ ಸಮಾಧಾನ ಹೊಂದಿದ್ದರೆ, ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದೆ. ಜೆಡಿಎಸ್‌ ಆಘಾತ ಅನುಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!