ಅಸಾದುದ್ದೀನ್ ಓವೈಸಿ 
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಮತಗಳ ವಿಭಜನೆ: ಕಾಂಗ್ರೆಸ್-ಜೆಡಿಎಸ್ ಗೆ ತಲೆನೋವಾದ ಎಐಎಂಐಎಂ!

ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಐಎಂಐಎಂ ಪಕ್ಷದ ಕಾರಣ ಅಲ್ಪ ಸಂಖ್ಯಾತ ಮತಗಳು ವಿಭಜನೆಯಾಗಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಪರೋಕ್ಷ ಹೊಡೆತ ಬಿದ್ದಿದೆ, ಅಲ್ಪ ಸಂಖ್ಯಾತ ಮತಗಳ ವಿಭಜನೆಯಿಂದಾಗಿ ಬಿಜೆಪಿಗೆ ಲಾಭವಾಗಿದೆ.

ಬೆಂಗಳೂರು: ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಐಎಂಐಎಂ ಪಕ್ಷದ ಕಾರಣ ಅಲ್ಪ ಸಂಖ್ಯಾತ ಮತಗಳು ವಿಭಜನೆಯಾಗಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಪರೋಕ್ಷ ಹೊಡೆತ ಬಿದ್ದಿದೆ, ಅಲ್ಪ ಸಂಖ್ಯಾತ ಮತಗಳ ವಿಭಜನೆಯಿಂದಾಗಿ ಬಿಜೆಪಿಗೆ ಲಾಭವಾಗಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತ್ತು ಬೆಳಗಾವಿಯಲ್ಲಿ ಎಐಎಂಐಎಂ ನಾಲ್ಕು ಸೀಟು ಗೆಲ್ಲುವಲ್ಲಿ ಸಫಲವಾಗಿದೆ, ಜೆಡಿಎಸ್ 5 ಸ್ಥಾನದಲ್ಲಿ ಜಯಗಳಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಎಐಎಂಐಎಂ ಅನ್ನು ದೊಡ್ಡ ಶಕ್ತಿಯೆಂದು ಗುರುತಿಸದಿದ್ದರೂ, ಕಡಿಮೆ ಸಂಖ್ಯೆಯ ಮತಗಳ ವಿಭಜನೆಯು ನಿಕಟವಾಗಿ ಸ್ಪರ್ಧಿಸಿದ ಸ್ಥಾನಗಳಲ್ಲಿ ವ್ಯತ್ಯಾಸವನ್ನು ಉಂಟುಮಾಡುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಎಐಎಂಐಎಂ 2,000-3,000 ಮತಗಳನ್ನು ಪಡೆದ ಕಾರಣ ಬಿಜೆಪಿಗೆ ಸಹಾಯವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿದರು, ಅಲ್ಪಸಂಖ್ಯಾತ ಮತಗಳು ವಿಭಜನೆಯಾಗಲು ಜೆಡಿಎಸ್ ಕಾರಣ ಎಂದು ದೂಷಿಸಿದ್ದಾರೆ.

ಜಾತ್ಯತೀತ ಮತಗಳ ವಿಭಜನೆಯ ಬಗ್ಗೆ ಅವರು ಜಾಗರೂಕರಾಗಿರಬೇಕು ಎಂದು ಜೆಡಿಎಸ್ ನಾಯಕ ವೈಎಸ್‌ವಿ ದತ್ತ ಹೇಳಿದ್ದಾರೆ. ಮತಗಳನ್ನು ವಿಭಜಿಸಲು ಬಿಜೆಪಿ ಮತ್ತು ಎಐಎಂಐಎಂ ನಡುವೆ ಒಪ್ಪಂದ ನಡೆದಿದೆ. "ಇದು ಬಿಜೆಪಿಯ ಬಿ-ಟೀಮ್" ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವ್ಯಂಗ್ಯವಾಡಿದ್ದಾರೆ.

ಎಐಎಂಐಎಂ  ಅಂಶವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಚುನಾವಣಾ ಕಾರ್ಯತಂತ್ರಗಳನ್ನು ಪುನರ್ ರಚಿಸಬೇಕಾಗಬಹುದು. ಪಕ್ಷದ ಫಲಿತಾಂಶಗಳಿಂದ ಉತ್ತೇಜಿತರಾಗಿರುವ  ಅಸಾದುದ್ದೀನ್ ಓವೈಸಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ಹಾಗೂ 2023 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಈಗಾಗಲೇ ಯೋಜಿಸುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ ನಾವು 50 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ. ನಗರ ಪಾಲಿಕೆ ಚುನಾವಣೆಯಲ್ಲಿ ನಾವು ಒಂದೇ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಹಲವರು ಹೇಳಿದರು, ಆದರೆ ನಾವು ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇವೆ ಮತ್ತು ಮೂರು ಸ್ಥಾನಗಳಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದೇವೆ. ಬೆಳಗಾವಿಯಲ್ಲಿ ನಾವು ಒಂದು ಸ್ಥಾನವನ್ನೂ ಗೆದ್ದಿದ್ದೇವೆ ಎಂದು ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನ್ ಗಣಿ ಹೇಳಿದರು.

ಎಐಎಂಐಎಂ ಬಿಜೆಪಿಯ ಬಿ-ಟೀಮ್  ಮತ್ತು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸುತ್ತಿದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದರು. ಕಲಬುರಗಿಯಲ್ಲಿ ಎಐಎಂಐಎಂ ತನ್ನ ಛಾಪು ಮೂಡಿಸುವಲ್ಲಿ ವಿಫಲವಾಗಿದೆ, ಇದು ಎಲ್ಲ ಕ್ಷೇತ್ರಗಳಲ್ಲಿಯೂ ಅಲ್ಪಸಂಖ್ಯಾತ ಮತದಾರರನ್ನು ಓಲೈಸುವುದು ಪಕ್ಷಕ್ಕೆ ಸುಲಭದ ಕೆಲಸವಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT