ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಮಾತನಾಡಿದ ಅವರು,  ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 

ದೆಹಲಿ ಪ್ರವಾಸ ಫಲಪ್ರದವಾಗಿದೆ. ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ( ದಾಬಸ್ ಪೇಟೆಯಿಂದ- ಮೈಸೂರು ರಸ್ತೆವರೆಗೆ) ಎರಡ್ಮೂರು ವರ್ಷಗಳಿಂದ ಬಾಕಿಯಿದೆ. ಅದನ್ನು ಮುಂದುವರೆಸಲಿದ್ದು, ಐದಾರು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ಹೇಳಿದರು.

 ಬೆಂಗಳೂರು ಮತ್ತು ಕೋಲಾರದ ನಡುವೆ ಹಾರ್ಡ್ ವೇರ್ ಪಾರ್ಕ್ ,  ನಗರ ಉಪ ರೈಲ್ವೆ ಯೋಜನೆ ಸೇರಿದಂತೆ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಲಾಗಿದೆ. ತುಮಕೂರು- ದಾವಣಗೆರೆ, ಹುಬ್ಬಳ್ಳಿ- ಬೆಳಗಾವಿ, ಬೀದರ್, ಕಲಬುರಗಿ ಎಲ್ಲ ಕಡೆ ಆದಷ್ಟು ಬೇಗ ರೈಲು ಯೋಜನೆಗಳನ್ನು ಆರಂಭಿಸುವ ಬಗ್ಗೆ ಮಾತುಕತೆ ನಡೆದಿದೆ ಎಂದರು. 

ನಿಫಾ ವೈರಸ್ ವಿಚಾರವಾಗಿ, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕೇರಳದಿಂದ ಆಗಬಹುದಾದ ಸಮಸ್ಯೆಗಳನ್ನು ನಿಯಂತ್ರಿಸುವ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!