ಎಚ್. ಡಿ. ಕುಮಾರಸ್ವಾಮಿ, ಅಶೋಕ್ 
ರಾಜಕೀಯ

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ

ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್  ಇಂದು   ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಮನಗರ: ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್  ಇಂದು   ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ ನಮ್ಮ ಶಾಸಕರ ಜೊತೆ ಎಲ್ಲ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅಶೋಕ್ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದ ರೈತಾಪಿ ಜನ ಎದುರಿಸುತ್ತಿರುವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಸಮಾಲೋಚಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸ್ಟಿಂಗ್‌ ಆಪರೇಷನ್‌ ರೂವಾರಿ, ರೌಡಿಶೀಟರ್‌ ಫೋಟೋ ರಿಲೀಸ್‌ ಮಾಡಿದ ಕುಮಾರಸ್ವಾಮಿ!

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video