ನರೇಂದ್ರ ಮೋದಿ 
ರಾಜಕೀಯ

ಬಿಜೆಪಿ ಪಾಲಿಗೆ ರಾಜಕೀಯವೆಂದರೆ ಕಳ್ಳದಂಧೆ; ಮೋದಿ ಅಣತಿಯಂತೆ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟ: ಕಾಂಗ್ರೆಸ್

ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಆಪರೇಷನ್ ಕಮಲಕ್ಕಾಗಿ ಹಣ ಹೂಡಿದ್ದೇಕೆ ಎಂದು ಭಾರತೀಯ ಜನತಾ ಪಕ್ಷವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಆಪರೇಷನ್ ಕಮಲಕ್ಕಾಗಿ ಹಣ ಹೂಡಿದ್ದೇಕೆ ಎಂದು ಭಾರತೀಯ ಜನತಾ ಪಕ್ಷವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್,  ಬಿಜೆಪಿಯ ಆಂತರಿಕ ಕಿತ್ತಾಟದಲ್ಲಿ ಸಿಪಿ ಯೋಗೀಶ್ವರ್ ಆಪರೇಷನ್ ಕಮಲಕ್ಕಾಗಿ 9 ಕೋಟಿ ಸಾಲ ಮಾಡಿದ್ದರು ಎಂಬ ಅಂಶ ಬಯಲಾಗಿತ್ತು, ಸಾಲ ಮಾಡಿದ್ದೇಕೆ? ಯಾಕಾಗಿ ಈ ಬಂಡವಾಳ ಹೂಡಿಕೆ? ಬಿಜೆಪಿ ಪಾಲಿಗೆ ರಾಜಕೀಯವೆಂದರೆ 'ಕಳ್ಳದಂಧೆ'ಯಾಗಿದೆ.

ಈ ಎಲ್ಲಾ ಭ್ರಷ್ಟಾಚಾರಗಳು ಮೋದಿಯವರ ಅಣತಿಯಂತೆ ನಡೆಯುತ್ತಿರುವುದು ಸ್ಪಷ್ಟ. ಪೆಟ್ರೋಲ್ ಡೀಸೆಲ್‌ಗಳ ಬೆಲೆ ಏರಿಕೆಯಿಂದ ಇಡೀ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ, ಬಹುತೇಕ ವಸ್ತುಗಳ ಬೆಲೆ ಏರಿಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಲಿದೆ. ಆರ್ಥಿಕ ಚಟುವಟಿಕೆಗಳು ಕುಂಠಿತಗೊಳ್ಳಲಿವೆ. ಆದರೆ ಬಿಜೆಪಿ ಸರ್ಕಾರ ತೆರಿಗೆ ಇಳಿಸುವ ಸಣ್ಣ ಮನಸ್ಸನ್ನೂ ಮಾಡದೆ ನಿರ್ದಯವಾಗಿ ನಡೆದುಕೊಳ್ಳುತ್ತಿದೆ ಭ್ರಷ್ಟ ಬಿಜೆಪಿ ಸರ್ಕಾರ ಎಂದು ಟಾಂಗ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!