ರಾಜಕೀಯ

ಸಿದ್ದರಾಮಯ್ಯ ಅವರನ್ನು ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸುವುದೇ ನನ್ನ ಗುರಿ: ಯಡಿಯೂರಪ್ಪ

Shilpa D

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯಡಿಯೂರಪ್ಪ ಮೊದಲ ಬಾರಿಗೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೋಂಡರು, 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪಣ ತೊಟ್ಟಿರುವುದಾಗಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ, ಅವರಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಹೇಳಿದ್ದಾರೆ. ಇನ್ನೂ ಸದನ ಆರಂಭಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. 

ಪಕ್ಷದ ಒಬ್ಬ ಸಾಮಾನ್ಯ ಶಾಸಕನಂತೆ ಕೆಲಸ ಮಾಡುತ್ತೇನೆ, ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ. ಒಬ್ಬ ಶಾಸಕನಾಗಿ ಕೆಲಸ ಮಾಡ್ತೇನೆ. ಸಿಎಂ ಆಗಿಯೇ ಕೆಲಸ ಮಾಡಬೇಕು ಅಂತ ಏನು ಇಲ್ಲ. ಸರ್ಕಾರದ ಒಳ್ಳೆಯ ಕೆಲಸಗಳನ್ನು ಶ್ಲಾಘಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು. ಮುಂದಿನ ದಿನ ಸಿದ್ದರಾಮಯ್ಯ ಆಕಸ್ಮಾತ್ ಆಗಿ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ  ಎಂದು ತಿಳಿಸಿದರು.

ಕಲಾಪದಲ್ಲಿ ಮುಖ್ಯ ಸಚೇತಕರ ಪಕ್ಕದ ಆಸನವನ್ನು ನೀಡಬೇಕೆಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಲ್ಲಿ ಮನವಿ ಮಾಡಿದ್ದೆ, ಅವರು ನನ್ನ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

SCROLL FOR NEXT