ಸಂಗ್ರಹ ಚಿತ್ರ 
ರಾಜಕೀಯ

ಸೆಪ್ಟೆಂಬರ್ 18-19 ರಂದು ದಾವಣೆಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ.

ದಾವಣಗೆರೆ: ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ.

ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ.

ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.‌ ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್‌ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ, ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ತಲೆ ಮೇಲೆ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ..!

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ, ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!

Pune Fort Murder: ಎಂಗೇಜ್ ಮೆಂಟ್ ಗೂ ಮುನ್ನ ಕೇತನ್ ನಿಂದ 1 ಕೋಟಿ ರೂ. ಪಡೆದು ಚೇತನ್ ಗೆ ವರ್ಗಾಯಿಸಿದ್ದ ಪಾತಕಿ ಸಿಯಾ ಗೋಯಲ್!

ಇರಾನ್ ಯುದ್ಧದಲ್ಲಿ ಅನಿರೀಕ್ಷಿತ ಗೆಲುವು ಕಂಡ ಕ್ಯಾಲಿಫೋರ್ನಿಯಾದ ಪಿಸ್ತಾಶಿಯೊ ಕಿಂಗ್ಸ್! (ಜಾಗತಿಕ ಜಗಲಿ)