ಡಿಕೆ. ಶಿವಕುಮಾರ್ 
ರಾಜಕೀಯ

ದೇಶವನ್ನು ನಿರುದ್ಯೋಗ ಕೊಂಪೆ ಮಾಡುವತ್ತ ಪ್ರಧಾನಿ ಮೋದಿ ಆಡಳಿತ: ಡಿಕೆ ಶಿವಕುಮಾರ್ ಕಿಡಿ

ದೇಶದಲ್ಲಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದು, ದೇಶವನ್ನು ನಿರುದ್ಯೋಗ ಕೊಂಪೆ ಮಾಡುವತ್ತ ದಾಪುಗಾಲಿರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ದೇಶದಲ್ಲಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದು, ದೇಶವನ್ನು ನಿರುದ್ಯೋಗ ಕೊಂಪೆ ಮಾಡುವತ್ತ ದಾಪುಗಾಲಿರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರ ಜೊತೆ ಮಾತನಾಡಿದ ಅವರು, ದೇಶವನ್ನು ನಿರುದ್ಯೋಗದ ಕೊಂಪಿಯನ್ನಾಗಿ ಮಾಡುವತ್ತ ಅವರ ಆಡಳಿತ ಸಾಗಿದೆ ಎಂದು ತೀವ್ರ ವಾಗ್ದಾಳಿ ಮಾಡಿದರು. ಹೀಗಾಗಿ ದೇಶಾದ್ಯಂತ ನಿರುದ್ಯೋಗ ದಿನ ಆಚರಣೆ ಜತೆಗೆ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಮೋದಿ ಅವರಿಗೆ ಹಿಂದಿರುಗಿಸಿ ಎಂದು ಅವರು ಕರೆ ನೀಡಿದರು ಆಗ್ರಹಪಡಿಸಿದರು.

'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದೇ ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ ಎಂದು ಪರೋಕ್ಷವಾಗಿ ಚಾಟಿ ಬೀಸಿದರು.

ಮೋದಿ ಹುಟ್ಟಿದ ದಿನದಂದು ನಿರುದ್ಯೋಗ ದಿನ ಎಂದು ಆಚರಿಸುವುದರಲ್ಲಿ ತಪ್ಪೇನಿದೆ?
ಪ್ರಜಾಪ್ರಭುತ್ವದಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಇದು ನಮ್ಮ ನೀತಿ ಮತ್ತು ಧರ್ಮ. ನಾವು ಜನರ ಸೇವೆ ಮಾಡಲು ಬಂದವರು. ಏನು ಮಾತನಾಡುತ್ತೇವೆ ಆ ಮಾತಿನಂತೆ ನಡೆದುಕೊಳ್ಳಬೇಕು. ದೇಶದಲ್ಲಿ ಎಲ್ಲ ಧರ್ಮದ ನಾಯಕರು ಇದನ್ನು ಪ್ರತಿಪಾದಿಸಿಕೊಂಡು ಬಂದಿದ್ದಾರೆ. ಆದರೆ ದೇಶದ ಪ್ರಧಾನಿ ನರೇಂದ್ರ ಮೋದಿ ಎರಡು ಕೋಟಿ ಉದ್ಯೋಗದ ಭರವಸೆ ಕೊಟ್ಟಿದ್ದರು. ಇವಾಗ ಕೋವಿಡ್ ಸಂದರ್ಭದಲ್ಲಿ ಎರಡು ಕೋಟಿ ಉದ್ಯೋಗ ನಷ್ಟವಾಗಿದೆ. ಯಾರಿಗೂ ಹೊಸತಾಗಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಸರ್ಕಾರ ಕಾರ್ಯಕ್ರಮ ಹಾಕಿಕೊಂಡಿಲ್ಲ ಎಂದು ಆರೋಪಿಸಿದರು. 

ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹುಟ್ಟಿದ ದಿನವನ್ನು ನಿರುದ್ಯೋಗ ದಿನ ಎಂದು ಆಚರಣೆ ಮಾಡುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ. ಅವರು ಯಾರಿಗೆ ಶುಭಾಶಯ ಸಲ್ಲಿಸಬೇಕು.  ಎಲ್ಲ ಯುವಕರು ನಿರುದ್ಯೋಗದ ಜೊತೆಗೆ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಪಡೆದುಕೊಂಡಿದ್ದೀರಿ ಅದನ್ನು ಹಿಂತಿರುಗಿಸುವಂತೆ ಕರೆ ಕೊಡುತ್ತೇನೆ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT