ರಾಜಕೀಯ

ವಿಡಿಯೋದಲ್ಲಿರುವುದು ನಾನಲ್ಲ, ವಿರೋಧಿಗಳು ನನ್ನ ವ್ಯಕ್ತಿತ್ವ ಹಾಳು ಮಾಡಲು ತಯಾರಿಸಿದ್ದಾರೆ: ಡಿವಿ ಸದಾನಂದಗೌಡ

Srinivasamurthy VN

ಬೆಂಗಳೂರು: ವಿವಾದಿತ ವಿಡಿಯೋದಲ್ಲಿರುವುದು ನಾನಲ್ಲ.. ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವ ಹಾಳು ಮಾಡುವ ಉದ್ದೇಶದಿಂದ ವಿರೋಧಿಗಳು ಈ ನಕಲಿ ವಿಡಿಯೋ ತಯಾರಿಸಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೋದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ. ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ. ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಂತೆಯೇ ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ ದಯವಿಟ್ಟು ನನಗೆ ಇನ್‌ಬಾಕ್ಸ್ ಮಾಡಿ ಎಂದು ಸದಾನಂದ ಗೌಡ ಮನವಿ ಮಾಡಿದ್ದಾರೆ. 

SCROLL FOR NEXT