ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ಹಾಗೂ ನಳಿನ್‌ ಕುಮಾರ್ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ: ಕೆ ಎಸ್ ಈಶ್ವರಪ್ಪ

ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಗೆಲ್ಲಬೇಕು ಎಂಬ ರೂಪುರೇಷೆಗಳ ಕುರಿತು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳಾಗುತ್ತವೆ. 2023ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ

ದಾವಣಗೆರೆ: ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಗೆಲ್ಲಬೇಕು ಎಂಬ ರೂಪುರೇಷೆಗಳ ಕುರಿತು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳಾಗುತ್ತವೆ. 2023ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ ಗುರಿಯಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾರ್ಯಕಾರಿಣಿ ಸಭೆ ಇಡೀ ರಾಜ್ಯದ ಪಕ್ಷದ ಕಾರ್ಯಕರ್ತರಿಗೆ ಸ್ಪೂರ್ತಿ ನೀಡುತ್ತದೆ ಎಂಬ ವಿಶ್ವಾಸವಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯಲು ಭಾರತೀಯ ಜನತಾ ಪಾರ್ಟಿ ಪ್ರಯತ್ನ ಪಡುತ್ತದೆ ಎಂದರು.

ಕೇಂದ್ರದ ನಾಯಕರು ಹೇಳಿದಂತೆ ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದ್ದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ