ಎಚ್.ಡಿ ಕುಮಾರಸ್ವಾಮಿ ಮತ್ತು ಸುರೇಶ್ 
ರಾಜಕೀಯ

ಸಂಸದರಿಂದ ಶಾಸಕರ ಅಧಿಕಾರ ಮೊಟಕುಗೊಳಿಸುವ ಯತ್ನ: ಡಿಕೆ ಸುರೇಶ್ ವಿರುದ್ಧ ಕುಮಾರಸ್ವಾಮಿ ಗರಂ!

ರಾಮನಗರ-ಚನ್ನಪಟ್ಟಣ ಕ್ಷೇತ್ರಗಳ ಶಾಸಕರಿಗೆ ಮಾಹಿತಿ ನೀಡದೇ ಸಂಸದ ಡಿ.ಕೆ ಸುರೇಶ್ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ಶಾಸಕ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು: ರಾಮನಗರ-ಚನ್ನಪಟ್ಟಣ ಕ್ಷೇತ್ರಗಳ ಶಾಸಕರಿಗೆ ಮಾಹಿತಿ ನೀಡದೇ ಸಂಸದ ಡಿ.ಕೆ ಸುರೇಶ್ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ಶಾಸಕ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಮನಗರದಿಂದ ಅನಿತಾ ಮತ್ತು ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದಾರೆ.  ಶೂನ್ಯ ವೇಳೆಯಲ್ಲಿ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಕುಮಾರಸ್ವಾಮಿ, ಸಂಸದರು ರಾಮನಗರ ಜಿಲ್ಲಾಧಿಕಾರಿಗೆ  ಪತ್ರ ಬರೆದು ಮೀಟಿಂಗ್ ಆಯೋಜಿಸಿದ್ದಾರೆ, ಆದರೆ ಚನ್ನಪಟ್ಟಣ ಮತ್ತು ರಾಮನಗರ ಶಾಸಕರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು
ಆರೋಪಿಸಿದರು.

ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲು ಸಂಸದರಿಗೆ ಅಧಿಕಾರವಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ ನಂತರ ಸಭೆ ರದ್ದಾಗಿದೆ. ಆದರೆ ಮತ್ತೊಂದು ಸಭೆ ಸೋಮವಾರ ನಡೆದಿದೆ. ಇದು ಶಾಸಕರ ಅಧಿಕಾರವನ್ನು ಮೊಟಕುಗೊಳಿಸುವ ಯತ್ನ ಎಂದು ಹೇಳಿದ್ದಾರೆ.

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಗಳನ್ನು ಮಾತ್ರ ಸಂಸದರು ನಡೆಸಬಹುದು, ಆದರೆ ಅವರು ಸ್ಥಳೀಯ ಶಾಸಕರನ್ನು ಆಹ್ವಾನಿಸಬೇಕು ಎಂದು ಕಾನೂನು  ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದರು. ಸಭೆಯಲ್ಲಿ, ಸಂಸದರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾತ್ರ ಮಾತನಾಡಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel