ಗೌರವಾನ್ವಿತ ಸದನವನ್ನು ಮದುವೆ ಛತ್ರದಂತೆ ಬಿಜೆಪಿ ಭಾವಿಸಿದೆ! ಪ್ರಜಾಪ್ರಭುತ್ವದ ಘನತೆ ಅರಿಯದವರಿಂದ ಇನ್ನೇನು ನಿರೀಕ್ಷಿಸಲಾದೀತು?
ವಿಧಾನಸಬೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಭಾಷಣ ಮಾಡಿದ್ದಕ್ಕೆ ಕಾಂಗ್ರೆಸ್ ಹರಿ ಹಾಯ್ದಿದೆ
ಬೆಂಗಳೂರು: ವಿಧಾನಸಬೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಭಾಷಣ ಮಾಡಿದ್ದಕ್ಕೆ ಕಾಂಗ್ರೆಸ್ ಹರಿ ಹಾಯ್ದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಗೌರವಾನ್ವಿತ ಸದನವನ್ನು ಬಿಜೆಪಿ ಛತ್ರದಂತೆ ಭಾವಿಸಿದೆ, ನಿಯಮಗಳನ್ನ ಸದನ ಸದಸ್ಯರಲ್ಲದವರನ್ನ ಕರೆಸಿ ಭಾಷಣ ಮಾಡಿಸಿ ಯಾವ ಘನ ಕಾರ್ಯ ಸಾಧಿಸಿದೆ ಬಿಜೆಪಿ? ಎಂದು ಪ್ರಶ್ನಿಸಿದೆ.
ಹೀಗೆಯೇ ಬಿಟ್ಟರೆ ಸದನದಲ್ಲಿ ಮದುವೆ, ಮುಂಜಿಯಂತಹ ಸಮಾರಂಭಗಳನ್ನ ಮಾಡಲೂ ಬಿಜೆಪಿ ಹಿಂಜರಿಯುವುದಿಲ್ಲ! ಪ್ರಜಾಪ್ರಭುತ್ವದ ಘನತೆ ಅರಿಯದವರಿಂದ ಇನ್ನೇನು ನಿರೀಕ್ಷಿಸಲಾದೀತು? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.