ಸಾಂದರ್ಭಿಕ ಚಿತ್ರ 
ರಾಜಕೀಯ

ಹಾನಗಲ್-ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ: ಅಕ್ಟೋಬರ್ 30 ರಂದು ಮತದಾನ; ನವೆಂಬರ್ 2 ಮತ ಎಣಿಕೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಬೆಂಗಳೂರು: ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರವು ಸಿ.ಎಂ ಉದಾಸಿ ಅವರ ನಿಧನದಿಂದ ತೆರವಾಗಿತ್ತು. ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. 

ಅಕ್ಟೋಬರ್ 1ರಂದು ಉಪಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ಅಕ್ಟೋಬರ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.  ಅ. 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಅ.30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಉಪ ಚುನಾವಣೆಯ ದಿನಾಂಕ ಘೋಷಣೆಯಾದಿದ್ದರೂ ಮೂರು ಪಕ್ಷಗಳು ಉಪ ಸಮರಕ್ಕೆ ಮುಂಚಿನಿಂದಲೂ ಕಸರತ್ತು ನಡೆಸಿಕೊಂಡು ಬಂದಿದೆ. ಇದೀಗ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು ಮತ್ತಷ್ಟು ಕಾವೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel