ಕುಮಾರಸ್ವಾಮಿ 
ರಾಜಕೀಯ

ಹಾನಗಲ್ ಉಪ ಚುನಾವಣೆ: ಜೆಡಿಎಸ್ ನಿಂದ ನಯಾಜ್ ಸ್ಪರ್ಧೆ

ಅಕ್ಟೋಬರ್ 8 ರಂದು ನಡೆಯಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ನಯಾಜ್ ಅವರನ್ನು ಜೆಡಿಎಸ್ ಮಂಗಳವಾರ ಘೋಷಿಸಿದೆ.

ಬೆಂಗಳೂರು: ಅಕ್ಟೋಬರ್ 8 ರಂದು ನಡೆಯಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ನಯಾಜ್ ಅವರನ್ನು ಜೆಡಿಎಸ್ ಮಂಗಳವಾರ ಘೋಷಿಸಿದೆ.

ಜೆಡಿಎಸ್ ಪಕ್ಷವು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 123 ಅಸೆಂಬ್ಲಿ ಕ್ಷೇತ್ರಗಳಲ್ಲಿ ಗೆಲ್ಲುವ ರಣ ತಂತ್ರ ರೂಪಿಸಿದ್ದು, ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಖಚಿತ. ಪಕ್ಷದಲ್ಲಿ ನಯಾಜ್ ಸಕ್ರೀಯರಾಗಿರುವುದರಿಂದ ಅವರಿಗೆ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡುತ್ತಿರುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿಯಲ್ಲಿಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ. ಪಕ್ಷ ಸಂಘಟನೆಗಾಗಿ ಕಾರ್ಯಾಗಾರ ನಡೆಸುತ್ತಿರುವ ಇದೇ ಸಂದರ್ಭದಲ್ಲಿ ಉಪಚುನಾವಣೆ ಎದುರಿಸಲು ಜೆಡಿಎಸ್ ಸಕಲ ಸಿದ್ಧವಾಗಿದ್ದು, ಈ ಉಪಚುನಾವಣೆ ಜೆಡಿಎಸ್ ಪಕ್ಷಕ್ಕೆ ಮುಂದಿನ ಚುನಾವಣೆಗೆ ಪೂರ್ವಸಿದ್ಧತಾ ಪರೀಕ್ಷೆಯಂತೆ ಬಂದಿದೆ ಎಂದರು.

ಸಿಂದಗಿ ಸಿಂಧಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಎರಡೂ ಕಡೆ ನಮ್ಮ ಪಕ್ಷಕ್ಕೆ ಉತ್ತಮ ನೆಲೆ ಇದೆ. ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುವುದಾಗಿ ಮಾಜಿ ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT