ರಾಜಕೀಯ

ಹಾನಗಲ್, ಸಿಂದಗಿ ಉಪ ಚುನಾವಣೆ: ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಲಿರುವ ಬಿಜೆಪಿ

Sumana Upadhyaya

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಬಾರಿ ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ. ಮಾಜಿ ಸಚಿವ ಸಿಎಂ ಉದಾಸಿ ಅವರ ಅಕಾಲಿಕ ಸಾವಿನಿಂದ ತೆರವಾಗಿರುವ ಹಾನಗಲ್ ಕ್ಷೇತ್ರದಲ್ಲಿ ಮತ್ತು ಸಿಂದಗಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸೇವೆ, ಅನುಭವಗಳನ್ನು ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಉದಾಸಿ ಅವರ ಪುತ್ರ ಮತ್ತು ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿಗೆ ಪಕ್ಷವು ಚುನಾವಣಾ ಪ್ರಚಾರದ ಉಸ್ತುವಾರಿಯನ್ನು ನೀಡಬಹುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಆಗಿರುವುದರಿಂದ ಅವರು ಕೂಡ ತೀವ್ರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ನ ಎಂಸಿ ಮನಗೂಳಿ ಅವರ ನಿಧನದಿಂದ ತೆರವಾದ ಸ್ಥಾನದಲ್ಲಿ ಗೆಲುವು ಕಷ್ಟ ಎಂದು ಬಿಜೆಪಿ ಭಾವಿಸಿದಂತಿದೆ. ಅವರ ಮಗ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಅಚ್ಚರಿಯೆಂಬಂತೆ, ಕೆಆರ್ ಪೇಟೆ ಮತ್ತು ಸಿರಾ ಕ್ಷೇತ್ರಗಳ ಉಪಚುನಾವಣೆಯ ಉಸ್ತುವಾರಿ ನೀಡಿ ಗೆಲುವಿಗೆ ಪಾತ್ರರಾದ ಬಿಜೆಪಿ ಉಪಾಧ್ಯಕ್ಷ ಮತ್ತು ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ಈ ಬಾರಿ ಉಪ ಚುನಾವಣಾ ಉಸ್ತುವಾರಿ ನೀಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ.
ಅವರನ್ನು 25 ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಒಂದು ಕ್ಷೇತ್ರಕ್ಕೆ ಬಳಸಿಕೊಳ್ಳಬಹುದು, ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಗೆ ಅಕ್ಟೋಬರ್ 3 ರಂದು ಅಧಿಸೂಚನೆ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ತನ್ನ ರಾಜಕೀಯ ಭವಿಷ್ಯವು ಮೈಸೂರಿನಲ್ಲಿ ಎಂದು ಭಾವಿಸಿರುವ ವಿಜಯೇಂದ್ರ ಅವರು 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ವರುಣ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವಂತಿದೆ.ಈ ನಿಟ್ಟಿನಲ್ಲಿ ಮೈಸೂರು ಎಂಎಲ್ ಸಿ ಸ್ಥಾನಕ್ಕೆ ಚುನಾವಣೆಗೆ ನಿಲ್ಲುವವರ ಪರ ವಿಜಯೇಂದ್ರ ಪ್ರಚಾರ ಮಾಡುವ ಸಾಧ್ಯತೆ ಹೆಚ್ಚಳವಾಗಿದೆ. ಅವರ ಕಟ್ಟಾ ನಿಷ್ಠಾವಂತರು ಮತ್ತು ದೇವರಾಜ್ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ಎಂಎಲ್‌ಸಿ ಸ್ಥಾನಕ್ಕೆ ಸ್ಪರ್ಧಿಸುವ ನಿರೀಕ್ಷೆಯಿದೆ.

SCROLL FOR NEXT