ಡಿಕೆ ಶಿವಕುಮಾರ್ ಗೆ ಅದ್ಧೂರಿ ಸ್ವಾಗತ 
ರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ತರುವುದಕ್ಕಾಗಿ ನಮ್ಮ ಹೋರಾಟ: ಒಗ್ಗಟ್ಟಿನ 'ಜಪ' ಮಂತ್ರಿಸಿದ ಡಿಕೆ ಶಿವಕುಮಾರ್

: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಕಾಯುತ್ತಿದ್ದಾರೆ. ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪಕ್ಷದ ನಾಯಕರಿಗೆ ತಾಕೀತು ಮಾಡಿದರು.

ಚಿತ್ರದುರ್ಗ: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಕಾಯುತ್ತಿದ್ದಾರೆ. ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪಕ್ಷದ ನಾಯಕರಿಗೆ ತಾಕೀತು ಮಾಡಿದರು.

ತಾಲ್ಲೂಕಿನ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಸ್ಮಾರಕದಲ್ಲಿ ಭಾನುವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು.  ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೊರೆ ಹೆಚ್ಚಾಗಿದೆ. ಮೊಸರು, ಮಜ್ಜಿಗೆ, ಆಹಾರ ಧಾನ್ಯಗಳಿಗೂ ತೆರಿಗೆ ವಿಧಿಸಲಾಗಿದೆ. ಬ್ಯಾಂಕ್‌ ವ್ಯವಹಾರಕ್ಕೆ ಬಳಸುವ ಚೆಕ್‌ಬುಕ್‌ಗೂ ಜಿಎಸ್‌ಟಿ ವಿಧಿಸಲಾಗಿದೆ. ತೆರಿಗೆ ಹೊರೆಗೆ ಜನರು ಹೈರಾಣಾಗಿದ್ದಾರೆ. ಮತದಾರರ ಮನೆಗೆ ಭೇಟಿ ನೀಡಿ ಬಿಜೆಪಿ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಿ’ ಎಂದು ಹೇಳಿದರು.

ಆ.3ರಂದು ಸಿದ್ದರಾಮಯ್ಯ ಜನ್ಮ ದಿನಾಚರಣೆ ಹಿನ್ನೆಲೆ ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮೊದಲು, ಮುರುಘಾ ಮಠಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.  ಮೊದಲು ಮುರುಘಾ ಮಠಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗು ಡಿಕೆ ಅಭಿಮಾನಿಗಳು ಸೇಬಿನ ಹಾರ ಹಾಗೂ ಹೂವಿನ ಸುರಿಮಳೆಗೈಯ್ಯುವ ಮೂಲಕ ಅದ್ದೂರಿ ಸ್ವಾಗತ ಕೋರಿದರು.

ಆ. 3ಕ್ಕೆ ರಾಹುಲ್ ಗಾಂಧಿ ಚಿತ್ರದುರ್ಗದ‌ ಮುರುಘಾಮಠಕ್ಕೆ ಭೇಟಿ ನೀಡುತ್ತಾರೆ. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ಇತರೆ ಶ್ರೀಗಳನ್ನು ಭೇಟಿ ಮಾಡಲಿದ್ದಾರೆ.  ಆ. 3ಕ್ಕೆ ದಾವಣಗೆರೆ ಅಮೃತ ಮಹೋತ್ಸವದಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಜನ್ಮ ದಿನದ ಅಂಗವಾಗಿ ಅಮೃತ‌ ಮಹೋತ್ಸವ ಕಾರ್ಯಕ್ರಮವಿದ್ದು ಭಾರತ್ ಜೋಡೋ ಪಾದಯಾತ್ರೆ ವೇಳೆ ವಿವಿಧ ಮಠಾಧೀಶರ ಭೇಟಿ ಮಾಡಸಿದ್ದಾರೆ.  ಮುಂದಿನ ತಿಂಗಳಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌