ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಭದ್ರಕೋಟೆ, ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಒತ್ತಾಯ

2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಮೀಗಾ ಮನವಿ ಸಲ್ಲಿಸಿದ್ದಾರೆ.  

ಚಿಕ್ಕಮಗಳೂರು:  2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಮೀಗಾ ಮನವಿ ಸಲ್ಲಿಸಿದ್ದಾರೆ.  

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಬೇಸತ್ತಿದ್ದಾರೆ. ದಿವಂಗತ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ  ಕ್ಷೇತ್ರದಿಂದ ನಿಮ್ಮಂತಹ ಜನನಾಯಕರು ಈ ಬಾರಿ ಸ್ಪರ್ಧಿಸಿದರೆ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪುನರ್ಜನ್ಮವಾಗಲಿದೆ ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆ‌ಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವಂತೆ ಕಿಸಾನ್ ಕಾಂಗ್ರೆಸ್ ಸೆಲ್ ಒತ್ತಡ ಹೇರಿದೆ.

ಒಂದುಕಡೆ ಗೆಲುವಿನ ಕ್ಷೇತ್ರಕ್ಕಾಗಿ ಹುಡುಕಾಟ‌ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಇದೇ ಹೊತ್ತಿನಲ್ಲಿ ‌ಚಿಕ್ಕಮಗಳೂರು ವಿಧಾಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲು ಒತ್ತಡ ಹೇರಲಾಗುತ್ತಿದ್ದು ಯಾವ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಕಾದುನೋಡಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT