ಸಾಂದರ್ಭಿಕ ಚಿತ್ರ 
ರಾಜಕೀಯ

ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ; '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತ!

ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳನ್ನಾಡುತ್ತಿದ್ದು, ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತು ವ್ಯಂಗ್ಯವಾಡಿದೆ.

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳನ್ನಾಡುತ್ತಿದ್ದು, ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತು ವ್ಯಂಗ್ಯವಾಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಟೀಕಿಸಿದೆ.

ಮುಂದುವರಿದು, ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನು ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ  ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಎಂದು ಬಿಜೆಪಿ ಉತ್ತರಿಸಲಿ ಎಂದು ಕಾಂಗ್ರೆಸ್ ಕೇಳಿದೆ.

ನಾನೂ ಕೂಡ ಸಿಎಂ ಆಕಾಂಕ್ಷಿ ಎಂದಿರುವ ಉಮೇಶ್ ಕತ್ತಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬಸವರಾಜ ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿvsಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಪ್ರಶ್ನಿಸಿದೆ.

ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ದೂರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT