ರಾಜಕೀಯ

ಶೀಘ್ರದಲ್ಲೇ ಕಾಂಗ್ರೆಸ್ ಸೇರುವೆ- ಪೂರ್ವಜ್ ವಿಶ್ವನಾಥ್: ಅಪ್ಪ ಬಿಜೆಪಿಯಲ್ಲಿ- ಮಗನ ನಡೆ ಕಾಂಗ್ರೆಸ್ ಕಡೆಗೆ!

Shilpa D

ಮೈಸೂರು: ‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ..

ಕಾಂಗ್ರೆಸ್​ ಕೈ ಹಿಡಿಯಲು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎಚ್​ ವಿಶ್ವನಾಥ್​ ಪುತ್ರ ಪೂರ್ವಜ್ ವಿಶ್ವನಾಥ್ ತುದಿಗಾಲಿನಲ್ಲಿ ನಿಂತಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ ಸ್ವತಃ ಪೂರ್ವಜ್ ವಿಶ್ವನಾಥ್ ಅವರೇ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ‘ಪಕ್ಷ ಸೇರುವ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

‘ತಂದೆ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ನಿನ್ನಿಷ್ಟ ಎಂದಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವೆ. ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ’ ಎಂದು ಹೇಳಿದರು.

ಅಪ್ಪ ನೋಡಿದ್ರೆ  ಸಿದ್ದರಾಮಯ್ಯ ವಿರುದ್ಧ ಕೆಂಡಾಕಾರುತ್ತಾರೆ. ಇತ್ತ ಮಗ  ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್​ಗೆ ಸೇರುತ್ತಿದ್ದಾರೆ. ಈ ವಿಚಾರ ಈಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಏನಿದು ಅಪ್ಪ-ಮಗನ ಹೊಸ ಆಟ ಅನ್ನೋ ಮಾತುಗಳು ಸಹ ಕೇಳಿಬರುತ್ತಿದೆ.

SCROLL FOR NEXT